ಹರಿಯಾಣ: : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಭಾರತೀಯ ವಾಯುಪಡೆಯಿಂದ `ಗಾರ್ಡ್ ಆಫ್ ಆನರ್’ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಹರಿಯಾಣದ ಅಂಬಾಲಾದ ವಾಯುಪಡೆ ನಿಲ್ದಾಣದಲ್ಲಿ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ರಾಷ್ಟ್ರಪತಿಯಾಗಿದ್ದಾರೆ. ಇಂದು ಅಂಬಾಲಾ ವಾಯುನೆಲೆಯಿಂದ ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದಾರೆ. ವಾಯುಪಡೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಕೂಡ ಉಪಸ್ಥಿತರಿದ್ದರು.
ಏಪ್ರಿಲ್ ೮, ೨೦೨೩ ರಂದು, ಮುರ್ಮು ಅವರು ಅಸ್ಸಾಂನ ತೇಜ್ಪುರ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-೩೦ ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೂರನೇ ರಾಷ್ಟçಪತಿ ಮತ್ತು ಎರಡನೇ ಮಹಿಳಾ ರಾಷ್ಟçದ ಮುಖ್ಯಸ್ಥರಾದರು. ಮಾಜಿ ರಾಷ್ಟçಪತಿಗಳಾದ ಎಪಿಜೆ ಅಬ್ದುಲ್ ಕಲಾಂ ಮತ್ತು ಪ್ರತಿಭಾ ಪಾಟೀಲ್ ಅವರು ಕ್ರಮವಾಗಿ ಜೂನ್ ೮, ೨೦೦೬ ಮತ್ತು ನವೆಂಬರ್ ೨೫, ೨೦೦೯ ರಂದು ಪುಣೆ ಬಳಿಯ ಲೋಹೆಗಾಂವ್ನ ವಾಯುಪಡೆ ನಿಲ್ದಾಣದಲ್ಲಿ ಸುಖೋಯ್-೩೦ ಎಂಕೆಐ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ್ದರು. ಏಪ್ರಿಲ್ ೨೨ ರ ಭೀಕರ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತವು ಗುರಿಯಾಗಿಸಿಕೊಂಡ ಪ್ರತಿಕ್ರಿಯೆಯಾಗಿ ಆಪರೇಷನ್ ಸಿಂಧೂರ್ ಸಮಯದಲ್ಲಿ ರಫೇಲ್ ಜೆಟ್ಗಳನ್ನು ಬಳಸಲಾಯಿತು.



