ನವದೆಹಲಿ: ಭಾರತದ ಪ್ರಜಾಪ್ರಭುತ್ವದ ಘನತೆಯನ್ನು ಕಾಪಾಡಲು ಪ್ರತಿಪಕ್ಷಗಳು ಕೂಡ ನಮ್ಮೊಂದಿಗೆ ನಿಲ್ಲುವ ವಿಶ್ವಾಸವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.18ನೇ ಲೋಕಸಭಾ ಅಧಿವೇಶನ ಆರಂಭಕ್ಕೂ ಮುನ್ನ ಸಂಸತ್ನಲ್ಲಿ ಮೋದಿ ಮಾತನಾಡಿ, ಭಾರತವನ್ನು ಬಡತನದಿಂದ ಮುಕ್ತಗೊಳಿಸುವಲ್ಲಿ ದೊಡ್ಡ ಯಶಸ್ಸು ಸಾಧಿಸಬಹುದು, ನಮ್ಮ ಈ ಮನೆ ಸಂಕಲ್ಪದ ಮನೆಯಾಗಬೇಕು ಎಂದಿದ್ದಾರೆ.
ದೇಶದ ಜನತೆ ಕೂಡ ಪ್ರತಿಪಕ್ಷಗಳಿಂದ ಒಳ್ಳೆಯ ಹೆಜ್ಜೆಗಳನ್ನೇ ನಿರೀಕ್ಷಿಸುತ್ತಿದ್ದಾರೆ. ಭಾರತದ ಪ್ರಜಾಪ್ರಭುತ್ವ ಮತ್ತು ಪ್ರಜಾಪ್ರಭುತ್ವ ಸಂಪ್ರದಾಯಗಳನ್ನು ರಕ್ಷಿಸುತ್ತೇವೆ ಮತ್ತು 50 ವರ್ಷಗಳ ಹಿಂದೆ ಮಾಡಲಾದ ಕೆಲಸವನ್ನು ಭಾರತದಲ್ಲಿ ಯಾರೂ ಮಾಡಲು ಧೈರ್ಯ ಮಾಡಬಾರದು ಎಂಬ ಪ್ರತಿಜ್ಞೆಯನ್ನು ತೆಗೆದುಕೊಳ್ಳುತ್ತೇವೆ ಎಂದರು.
ಇದೇ ಮೊದಲ ಬಾರಿಗೆ ನೂತನ ಸಂಸತ್ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಲೋಕಸಭೆ ಚುನಾವಣೆ ಕುರಿತು ಮಾತನಾಡಿದ ಅವರು, ಸತತ ಮೂರನೇ ಬಾರಿಗೆ ಆಡಳಿತ ನಡೆಸಲು ಸಾರ್ವಜನಿಕರು ಸರ್ಕಾರಕ್ಕೆ ಅವಕಾಶ ನೀಡಿರುವುದು ಇತಿಹಾಸದಲ್ಲಿ ಇದು ಎರಡನೇ ಬಾರಿ. 60 ವರ್ಷಗಳ ನಂತರ ಈ ಅವಕಾಶ ಬಂದಿದೆ.
ಅಭಿವೃದ್ಧಿ ಹೊಂದಿದ ಭಾರತದ ಗುರಿಯೊಂದಿಗೆ 18ನೇ ಲೋಕಸಭೆ ಇಂದು ಆರಂಭವಾಗುತ್ತಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಅದ್ಧೂರಿಯಾಗಿ ಚುನಾವಣೆ ನಡೆಸುವುದು ಭಾರತೀಯರಿಗೆ ಹೆಮ್ಮೆಯ ವಿಷಯ.ಸ್ವಾತಂತ್ರ್ಯ ನಂತರ ಎರಡನೇ ಬಾರಿಗೆ ದೇಶದ ಜನತೆ ಸತತ ಮೂರನೇ ಬಾರಿಗೆ 60 ವರ್ಷಗಳ ನಂತರ ಬಂದಿರುವ ಸರ್ಕಾರಕ್ಕೆ ಸೇವೆ ಮಾಡುವ ಅವಕಾಶವನ್ನು ನೀಡಿದ್ದಾರೆ. ಇದಕ್ಕಾಗಿ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.