ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿಯೊಬ್ಬ ಭರ್ಜರಿ ಹುಟ್ಟಹಬ್ಬ ಆಚರಣೆ ಮಾಡಿಕೊಂಡಿರುವುದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ.
ಕಳೆದ ತಿಂಗಳು ವಿಚಾರಣಾಧೀನ ಖೈದಿಯಾಗಿ ಜೈಲಿನಲ್ಲಿರುವ ಉಮೇಶ್, ಅದ್ಧೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿದ್ದು ತಡವಾಗಿ ಬೆಳಕಿಗೆ ಬಂದಿದೆ. ಜೈಲು ಅಧಿಕಾರಿಗಳು ಬರ್ತ್ಡೇಗೆ ಜೈಲಿನಲ್ಲೆ ಅಕರ್ಷಕ ವೇದಿಕೆ ಸಜ್ಜು ಮಾಡಿ ಕೊಟ್ಟಿದ್ದಾರೆ ಎಂಬ ಆರೋಪವೂ ಇದೆ.ಪೀಣ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಆನಂದ್ ಕೊಲೆ ಕೃತ್ಯದಲ್ಲಿ ಭಾಗಿಯಾಗಿದ್ದ ಉಮೇಶ್ ಜೈಲಿಗೆ ಹೋಗಿದ್ದ.
ಇಂಥವನು ಪರಪ್ಪನ ಅಗ್ರಹಾರ ಜೈಲಿನಲ್ಲೇ ಬೆಂಬಲಿಗರೊಂದಿಗೆ ಕೇಕ್ ಕಟ್ ಮಾಡಿ ಸೆಲಬ್ರೆಷನ್ ಮಾಡಿಕೊಂಡಿದ್ದಾನೆ. ಒಳಗಡೆ ಅಷ್ಟೇ ಅಲ್ಲದೇ ಸೆಂಟ್ರಲ್ ಜೈಲ್ ಮುಂದೆಯೂ ಆತನ ಬೆಂಬಲಿಗರು ಹುಟ್ಟುಹಬ್ಬದ ಆಚರಣೆ ಮಾಡಿದ್ದಾರೆ.
ಜೈಲು ಅಧಿಕಾರಿಗಳ ಸಹಾಯ ಇಲ್ಲದೇ ಖೈದಿಯ ಭರ್ಜರಿ ಬರ್ತ್ಡೇ ಆಚರಣೆ ಸಾಧ್ಯವಿಲ್ಲ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿಯೇ ಆಗಿದೆ. ಆದರೆ ಇಷ್ಟೆಲ್ಲ ಬೆಳವಣಿಗೆ ಆದರೂ ಕೂಡ ಜೈಲಿನ ಮೇಲಧಿಕಾರಿಗಳು ತಮಗಿದರ ಮಾಹಿತಿ ಇಲ್ಲ ಎನ್ನುತ್ತಿದ್ದಾರೆ.