ಗಂಗಾವತಿ: ಎಸ್.ಆರ್.ಎಸ್. ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಹೇಮಗುಡ್ಡ ಸಮೀಪದ ಟೋಲ್ ಗೇಟ್ ಬಳಿ ಇಂದು ಬೆಳಿಗ್ಗೆ ನಡೆದಿದೆ.
ಘಟನೆಯಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ.ಹೈದರಾಬಾದ್ನಿಂದ ಬಂದಿದ್ದ ಬಸ್ ಬೆಳಗಾವಿಗೆ ತೆರಳುತ್ತಿತ್ತು ಎನ್ನಲಾಗಿದೆ.ಹೇಮಗುಡ್ಡದ ಬಳಿ ವೇಗವಾಗಿ ಎದುರಿಗೆ ಬಂದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಸಂಭವಿಸಿದೆ.
ಬಸ್ನಲ್ಲಿ 40ಕ್ಕೂ ಹೆಚ್ಚು ಪ್ರಯಾಣಿಕರಿದ್ದರು. ಗಾಯಾಳುಗಳನ್ನು ಗಂಗಾವತಿ ಮತ್ತು ಕೊಪ್ಪಳ ಸರ್ಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ. ಇನ್ನೂ ಕೆಲವರನ್ನು ಖಾಸಗಿ ಆಸ್ಪತ್ರೆಗೆ ಕಳುಹಿಸಲಾಗಿದೆ.