ಬೆಂಗಳೂರು: ರಾಜ್ಯದಲ್ಲಿ ಎದುರಾಗುವ ನೀರಿನ ಸಮಸ್ಯೆಯನ್ನು ನೀಗಲು ಸರ್ಕಾರ ಎಲ್ಲಾ ರೀತಿಯ ಕ್ರಮ ಜರುಗಿಸುತ್ತಿದೆ ಎಂದು ಸಚಿವ ಪ್ರಿಯಾಂಕ್ಖರ್ಗೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಡಿದ ಅವರು, ಈ ಹಿಂದಿನ ವರ್ಷಗಳಲ್ಲಿ ಎಂದು ಕಾಣದಷ್ಟೂ ಬಿಸಿಲಿನ ದಗೆಯಿದೆ. ಬಿಸಿಗಾಳಿ ಬೀಸುತ್ತಿದೆ. ಮುಂದಿನ ಎರಡು ತಿಂಗಳ ಕಾಲ ನೀರಿನ ಸಮಸ್ಯೆ ಎದುರಾಗಬಹುದು. ಈಗಾಗಲೇ ಮುಖ್ಯಮಂತ್ರಿಯವರು ಡಿಸಾಸ್ಟರ್ ಮ್ಯಾನೇಜ್ಮೆಂಟ್ ಸಭೆ ನಡೆಸಿದ್ದಾರೆ. ನೀರಿನ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಆರೋಗ್ಯ ಇಲಾಖೆಯಿಂದ ಎಸ್ಒಪಿ ಮಾಡಲಾಗಿದೆ. ಅಣೆಕಟ್ಟು ಹಾಗೂ ಬೋರ್ವೆಲ್ಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತಿದೆ. ನಮ್ಮ ಸರ್ಕಾರದಲ್ಲಿ ಹಣದ ಕೊರತೆಯಿಲ್ಲ. ಖಾಸಗಿಯವರ ಬೋರ್ವೆಲ್ಗಳನ್ನು ಬಾಡಿಗೆ ಪಡೆಯಲು ನಿರ್ಧರಿಸಲಾಗಿದೆ. ಕಾರ್ಯಪಡೆ ರಚನೆಯಾಗುವ ಅಧ್ಯಕ್ಷರುಗಳು ಈ ಬಗ್ಗೆ ಕ್ರಮ ಜರುಗಿಸುತ್ತಾರೆ. ಕಾರ್ಯಪಡೆಗೆ ಶಾಸಕರು ಅಧ್ಯಕ್ಷರಾಗಿದ್ದಾರೆ ಎಂದು ತಿಳಿಸಿದ್ದಾರೆ. ಈಗಾಗಲೇ ಮುಖ್ಯಮಂತ್ರಿಯವರು ಕುಡಿಯುವ ನೀರಿನ ಸಮಸ್ಯೆಗೆ ಜಿಲ್ಲಾಧಿಕಾರಿಗಳೇ ಹೊಣೆಯಾಗುತ್ತಾರೆ ಎಂದು ತಿಳಿಸಿದ್ದರು. ಸುಮಾರು 114 ತಾಲೂಕುಗಳಲ್ಲಿ ನೀರಿನ ಸಮಸ್ಯೆ ಇರುವುದಾಗಿ ತಿಳಿದುಬಂದಿದೆ.
ನೀರಿನ ಸಮಸ್ಯೆ ನೀಗಲು ಕ್ರಮ ಶಾಸಕರ ಅಧ್ಯಕ್ಷತೆಯಲ್ಲಿ ಕಾರ್ಯಪಡೆ ರಚನೆ: ಪ್ರಿಯಾಂಕ್ಖರ್ಗೆ



