ಹೆಣ್ಣುಮಕ್ಕಳಿಗೆ ಸೀರೆಯಷ್ಟೇ ರವಿಕೆಯೂ ಅಚ್ಚುಮೆಚ್ಚು. ಅಂತಹ “ರವಿಕೆ” ಯ ಸುತ್ತ ಹೆಣೆಯಲಾದ ಕಥಾಹಂದರ ಹೊಂದಿರುವ “ರವಿಕೆ ಪ್ರಸಂಗ” ಚಿತ್ರ ಕಳೆದವಾರ ಬಿಡುಗಡೆಯಾಗಿ ಜನರ ಮನ ಗೆಲುತ್ತಿದೆ. “ರವಿಕೆ” ಯ ಕುರಿತಾದ ಸಿನಿಮಾ ಆಗಿರುವುದರಿಂದ ಚಿತ್ರತಂಡ ವಿಶೇಷ ಡಿಸೈನ್ ರವಿಕೆ ಹೊಲಿಯುವವರಿಗಾಗಿ ಸ್ಪರ್ಧೆ ಆಯೋಜಿಸಿತ್ತು.
ಆ ಸ್ಪರ್ಧೆಯಲ್ಲಿ ವಿಜೇತರಾದ ಸ್ಪರ್ಧಿಗಳಿಗೆ ಹೊಲಿಗೆ ಯಂತ್ರ, ನಗದು ಸೇರಿದಂತೆ ಅನೇಕ ಬಹುಮಾನಗಳನ್ನು ನೀಡಲಾಯಿತು. ನಿರ್ದೇಶಕ ಸಂತೋಷ್ ಕೊಡೆಂಕೆರಿ, ಕಥೆ ಬರೆದಿರುವ ಪಾವನ ಸಂತೋಷ್, ನಟಿ ಗೀತಾಭಾರತಿ ಭಟ್, ಉದ್ಯಮಿ ಮತ್ತು ರಾಧಾಕೃಷ್ಣ ಚಾರಿಟೇಬಲ್ ಟ್ರಸ್ಟ್ ನ ಸಂಸ್ಥಾಪಕರಾದ ಗಿರೀಶ್, ಶಿವರುದ್ರಯ್ಯ, ಕಂದಯ್ಯ ಶೆಟ್ಟಿ, ಆಟೋ ನಾಗರಾಜ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಚಿತ್ರತಂಡದ ಸದಸ್ಯರು ಕೆಲವು ವಿಷಯಗಳನ್ನು ಮಾಧ್ಯಮದ ಮುಂದೆ ಹಂಚಿಕೊಂಡರು.