ಬೆಂಗಳೂರು: ರಾಜ್ಯಸಭೆ ಚುನಾವಣೆ ಗೆಲುವಿನ ಬಳಿಕ ನಾಸೀರ್ ಹುಸೇನ್ ಬೆಂಬಲಿಗರು ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿರುವುದು ಎಫ್ಎಸ್ಎಲ್ ವರದಿಯಲ್ಲಿ ದೃಢಪಟ್ಟಿದೆ.
ನಾಸಿರ್ ಸಾಬ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ. ಎಫ್ ಎಸ್ ಎಲ್ ನಲ್ಲಿ ಪರಿಶೀಲನೆ ವೇಳೆ ಆಡಿಯೋ ಮತ್ತು ವಿಡಿಯೋವನ್ನು ಎಡಿಟ್ ಮಾಡಿ ಸೇರಿಸಲಾಗಿಲ್ಲ. ಪಾಕ್ ಪರ ಘೋಷಣೆ ಕೂಗಿದ್ದು ನಿಜ ಎಂದು ತಿಳಿದು ಬಂದಿದೆ.
ಎಫ್ಎಸ್ಎಲ್ ವರದಿ ಅನ್ವಯ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಪೊಲೀಸರ ತನಿಖೆ ವೇಳೆ ಕೆಲ ಅನುಮಾನಿತ ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿತ್ತು. ಈಗಾಗಲೇ ವಶಕ್ಕೆ ಪಡೆದಿದ್ದ ಅನುಮಾನಿತ ವ್ಯಕ್ತಿಗಳ ವಾಯ್ಸ್ ರವಾನೆ ಮಾಡಲಾಗಿದೆ. ಅನುಮಾನಿತರ ಪೈಕಿ ಓರ್ವನನ್ನು ವಶಕ್ಕೆ ಪಡೆಯಲಾಗಿದೆ. ಎಫ್ಎಸ್ಎಲ್ನಿಂದ ವಾಯ್ಸ್ ಮ್ಯಾಚ್ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. ವಾಯ್ಸ್ ಮ್ಯಾಚ್ ಆದ ಕೂಡಲೇ ಅಧಿಕೃತವಾಗಿ ಆರೋಪಿಯನ್ನು ಬಂಧಿಸಲು ತಯಾರಿ ನಡೆದಿದೆ ಎಂದು ಹೇಳಲಾಗಿದೆ.