ಆನೇಕಲ್: ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯಿತು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮರಸೂರು ಪುರುಷೋತ್ತಮರೆಡ್ಡಿ ನೇತೃತ್ವದಲ್ಲಿ ಆಯೋಜನೆ ಮಾಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯಲ್ಲಿ ಯೋಜನೆಗಳ ಕುರಿತು ಹಾಗೂ ಯಾವ ರೀತಿ ಅನುಷ್ಠಾನ ಮಾಡಲಾಗುತ್ತಿದೆ ಎನ್ನುವ ಕುರಿತು ಸಮಗ್ರ ಚರ್ಚೆ ನಡೆಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮರಸೂರು ಪುರುಷೋತ್ತಮರೆಡ್ಡಿ ಅರ್ಹರಿಗೆ ಸೌಲಭ್ಯ ತಲುಪುತ್ತಿರುವುದು ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಲು ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ಹಾಗೂ ಮಾಹಿತಿಗಳನ್ನು ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಮಾಡಿದಾಗ ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ಸಿಗುವ ಈ ಯೋಜನೆ ಸಮರ್ಪಕವಾಗಿ ತಲುಪಲಿದೆ ಎಂದರು.
ಆನೇಕಲ್ ವಿಧಾನಸಭಾ ಕ್ಷೇತ್ರದಲ್ಲಿ ಎಪಿಎಲ್ ಮತ್ತು ಬಿಪಿಎಲ್ ಸೇರಿದಂತೆ ಒಟ್ಟು ರೂ.೯೫,೮೫೦ ಕಾರ್ಡುಗಳಿದ್ದು ಅರ್ಹರಿಗೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಹತ್ತು ಕೆಜಿ ಅಕ್ಕಿ ನೀಡಲಾಗುತ್ತಿದೆ. ೮೨,೨೩೮ ಜನ ಮಹಿಳೆಯರ ಗೃಹಲಕ್ಷಿ÷್ಮÃ ಯೋಜನೆ ಅಡಿಯಲ್ಲಿ ೨,೦೦೦ ಹಣ ಪಡೆಯುತ್ತಿದ್ದಾರೆ. ಗೃಹ ಜ್ಯೋತಿ ಯೋಜನೆಗಾಗಿ ಆನೇಕಲ್ ವಿಧಾನಸಭಾ ಕ್ಷೇತ್ರಕ್ಕೆ ೧೩.೩ ಕೋಟಿ ರೂ ಸಬ್ಸಿಡಿ ದೊರೆತಿದೆ. ೧೪೬೦ ಮಂದಿ ಯುವಕರು ಇವರಿಗೆ ಅರ್ಜಿ ಸಲ್ಲಿಸಿದ್ದು ಗ್ರಾಮ ಪಂಚಾಯಿತಿಗಳು ಇವನಿಗೆ ಯೋಜನೆಯ ಬಗ್ಗೆ ಯುವಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮಗಳನ್ನು ಮಾಡಿದಾಗ ಈ ಯೋಜನೆಯ ಪ್ರಯೋಜನ ಯುವಶಕ್ತಿಗೆ ಹೆಚ್ಚಾಗಿ ಆಗಲಿದೆ ಎಂದರು. ಗ್ಯಾರಂಟಿ ಯೋಜನೆಗಳನ್ನು ಪ್ರತಿಯೊಬ್ಬರ ಮನೆ ಬಾಗಿಲಿಗೆ ತಲುಪಿಸಲು ಅಧಿಕಾರಿಗಳು ಸ್ಥಳೀಯ ಪಂಚಾಯಿತಿಗಳು ಕ್ರಮ ವಹಿಸಬೇಕು, ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ ನಡೆಸಿ ಫಲಾನುಭವಿಗಳ ಸಮಸ್ಯೆಯನ್ನು ಆಲಿಸಲಾಗುವುದು ಎಂದು ಹೇಳಿದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಮಂಜುನಾಥ ಮಾತನಾಡಿ, ಆನೇಕಲ್ ತಾಲೂಕು ವ್ಯಾಪ್ತಿಯಲ್ಲಿ ಈ ಯೋಜನೆಯ ಬಗ್ಗೆ ಜನರಿಗೆ ತಿಳಿಸುವ ಹಾಗೂ ಈಗಾಗಲೇ ಸರಿಯಾದ ರೀತಿಯಲ್ಲಿ ನಿರ್ವಹಣೆಯನ್ನು ಮಾಡಲಾಗುತ್ತಿದೆ ಮುಂದಿನ ದಿನಗಳಲ್ಲಿ ಇನ್ನಷ್ಟು ಈ ಯೋಜನೆಯ ಬಗ್ಗೆ ಜನ ಕೂಡ ತಿಳಿದುಕೊಂಡು ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಸಭೆಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸದಸ್ಯೆ ಸುಶೀಲಮ್ಮ, ನೆರಳೂರು ಲೋಕೇಶ್, ಎಸ್ ಟಿ ಡಿ ರಮೇಶ್, ಸನಾವುಲ್ಲ ಖಾನ್, ಜಯಸುಧಾ, ಮುರಳಿದರ, ನಾಗರತ್ನ ಮತ್ತಿತರರು ಹಾಜರಿದ್ದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯಿಂದ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆ



