ಬೆಂಗಳೂರು ಗ್ರಾಮಾಂತರ ಜಿಲ್ಲೆ: ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಮಕ್ಕಳ ಸಹಾಯವಾಣಿ ಜಂಟಿಯಾಗಿ ಬಾಲ/ಕಿಶೋರ ಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವುದಾಗಿ ಬಂದದೂರಿನ ಮೇರೆಗೆ ತಪಾಸಣೆಯನ್ನು ಕೈಗೊಂಡು ಇಬ್ಬರು ಬಾಲ ಕಾರ್ಮಿಕ/ಕಿಶೋರ ಕಾಮಿ9ಕ ರನ್ನು ದೊಡ್ಡಬಳ್ಳಾಪುರ ತಾಲ್ಲೂಕಿನ ಮೆಳೆಕೋಟೆ ಗ್ರಾಮದಲ್ಲಿ ರಕ್ಷಿಸಲಾಗಿದೆ.
ಹಾಗೆಯೇ ಮೆಳೆಕೋಟೆ ಗ್ರಾಮದಲ್ಲಿ ವಿವಿಧ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳಿಗೆ ಸ್ಟಿಕರ್ ಮತ್ತು ಪಾಂಪ್ಲೆಟ್ಸ್ ಗಳನ್ನು ನೀಡಿ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳದಂತೆ ಜಾಗೃತಿಯನ್ನು ಮೂಡಿಸಲಾಯಿತು. ರಕ್ಷಿಸಲಾದ ಮಕ್ಕಳನ್ನು ತಾತ್ಕಾಲಿಕ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿದೆ.ತನಿಖಾ ಕಾರ್ಯಾಚರಣೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ನಾಗೇಂದ್ರ ಹೆಚ್.ಆರ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಸುಬ್ಬಾರಾವ್. ಎಸ್, ಕಾರ್ಮಿಕ ನಿರೀಕ್ಷಕ ದಯಾನಂದ ಸಾಗರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ರಶ್ಮಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂಧಿ ಶ್ರೀಧರ್ ಹಾಗೂ ಮಕ್ಕಳ ಸಹಾಯವಾಣಿಯ ಸಿಬ್ಬಂದಿಗಳಾದ ಶ್ರೀನಿವಾಸ, ಸೌಮ್ಯ ಪಾಲ್ಗೊಂಡಿದ್ದರು.