ನವದೆಹಲಿ: ದೆಹಲಿ ಮದ್ಯದಂಗಡಿ ಲೈಸೆನ್ಸ್ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಗುರುವಾರ ರಾತ್ರಿ ಬಂಧಿಸಿದ್ದಾರೆ.
ದೆಹಲಿ ಸರ್ಕಾರದಲ್ಲಿ ಸಚಿವರಾಗಿದ್ದ ಸತ್ಯೇಂದ್ರ ಜೈನ್, ಮನೀಶ್ ಸಿಸೊಡಿಯಾ, ರಾಜ್ಯಸಭೆ ಸದಸ್ಯ ಸಂಜಯ್ ಸಿಂಗ್ ಮತ್ತು ತೆಲಂಗಾಣದ ಬಿ.ಆರ್.ಎಸ್. ಪಕ್ಷದ ಶಾಸಕಿ ಕವಿತಾ ಅವರ ಬಳಿಕ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.
ಅಧಿಕಾರದಲ್ಲಿದ್ದಾಗಲೇ ದೆಹಲಿಮುಖ್ಯಮಂತ್ರಿ ಕೇಜ್ರಿವಾಲ್ ಅವರನ್ನುಬಂಧಿಸಲಾಗಿದ್ದು, ಸಿಎಂ ಹುದ್ದೆಯಲ್ಲಿ ದ್ದಾಗ ಬಂಧಿತನಾದ ದೇಶದ ಮೊದಲ ನಾಯಕ ಅವರಾಗಿದ್ದಾರೆ. ಬಂಧನಕ್ಕೊಳಗಾದರೂ ಅರವಿಂದ್ ಕೇಜ್ರಿವಾಲ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ. ಅವರು ತಮ್ಮ ಎಲ್ಲಾ ಖಾತೆಗಳನ್ನು ತ್ಯಜಿಸಲಿದ್ದಾರೆ. ಜೈಲಿನಿಂದಲೇ ಆಡಳಿತ ನಡೆಸಲಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ನಾಯಕರು ಹೇಳಿದ್ದಾರೆ.
ಕೇಜ್ರಿ ಬಂಧನ ಖಂಡಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ರಾಷ್ಟ್ರಾದ್ಯಂತ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.ಎಐಸಿಸಿ ಮುಖಂಡ ರಾಹುಲ್ ಗಾಂಧಿ ಅವರು ಕೇಜ್ರೀವಾಲ್ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.ಕೇಜ್ರಿವಾಲ್ ಬಂಧನದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದೆಹಲಿಯ ಆಮ್ ಆದ್ಮಿ ಪಕ್ಷದ ಕಚೇರಿ ಸುತ್ತಮುತ್ತ ಸೇನಾ ತುಕಡಿಗಳು ಸೇರಿದಂತೆ ಬಿಗಿ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.ಇಂದು ಮಧ್ಯಾಹ್ನದ ವೇಳೆಗೆ ಕೇಜ್ರಿವಾಲ್ ಅವರನ್ನು ಇಡಿಯಿಂದ ನ್ಯಾಯಾಲಯದ ಮುಂದೆ ಹಾಜರುಪಡಿಸುವ ಸಾಧ್ಯತೆಯಿದೆ.