ಧಾರವಾಡ : ಕನಿಷ್ಠ 7 ತಾಸು ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು ಹಾಗೂ ಬರಗಾಲದ ಕಾಮಗಾರಿ ಆರಂಭಿಸಬೇಕು ಎಂದು ಆಗ್ರಹಿಸಿ ಧಾರವಾಡ ಜುಬಿಲಿ ವೃತ್ತ ಬಂದ್ ಮಾಡಿರೈತರು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ರಾಜ್ಯ ರೈತ ಸಂಘ, ಹಾಗೂ ಹಾಗೂ ಹಸಿರು ಸೇನೆ ಸದಸ್ಯರು ರೈತ ವಿರೋಧಿ ನೀತಿ ಸರ್ಕಾರ ಕೈಬಿಡಬೇಕು ಇಲ್ಲವೇ ರಾಜ್ಯಾದ್ಯಂತ ಉಗ್ರ ಹೋರಾಟ ಅನಿವಾರ್ಯ ಎಂದುಆಕ್ರೋಶ ವ್ಯಕ್ತಪಡಿಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
ಯಾವುದೇ ಸರ್ಕಾರ ಬಂದರೂ ರೈತರಿಗೆ ಅನುಕೂಲ ಕಲ್ಪಿಸಿಲ್ಲ, ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಈ ಕೂಡಲೇ ರೈತರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಸರ್ಕಾರ ಯೋಜನೆ ಜಾರಿ ಮಾಡಬೇಕು, ನಿರಂತರ ವಿದ್ಯುತ್ ಪೂರೈಕೆ ಮಾಡಬೇಕು, ಬರಗಾಲ ಕಾಮಗಾರಿ ಆರಂಭಮಾಡಬೇಕು ಎಂದು ಒತ್ತಾಯಿಸಿದರು.
ಈ ಪ್ರತಿಭಟನೆಯಲ್ಲಿ ರವಿರಾಜ್ ಕಂಬಳಿ, ನಾಗಪ್ಪಹುಂಡಿ, ಲಕ್ಷ್ಮಿ ದೊಡ್ಡಮನಿ, ಮಾದೇವಿ ಪಾಟೀಲ್, ಈರಣ್ಣಬಳಿಗಾರ ಸೇರದಂತೆ ಮೊದಲಾದವರು ಭಾಗವಹಿಸಿದ್ದರು.