ತಿ.ನರಸೀಪುರ :ಮಹಿಳೆಯರು, ಹೆಣ್ಣುಮಕ್ಕಳು ಹಾಗೂ ವಯೋವೃದ್ಧರ ಮೇಲಿನ ದೌರ್ಜನ್ಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ, ಸಮಾಜದಲ್ಲಿ ಮಹಿಳೆ ಯರಿಗೆ ಸುರಕ್ಷಿತ ವಾತಾವರಣ ಕಲ್ಪಿಸಬೇಕು ಮತ್ತು ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕರ ಕೆಲಸ ಕಾರ್ಯಗಳನ್ನು ಸುಗಮವಾಗಿ ಮಾಡಿಕೊಡುವಂತೆ ಹಾಗೂ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡುವಂತೆ ಆಗ್ರಹಿಸಿ ಜೈ ಕನ್ನಡಾಂಬೆ ಮಹಾಸೇನೆ ತಾಲೂಕು ಘಟಕದ ವತಿಯಿಂದ ಪಟ್ಟಣದಲ್ಲಿ ಪ್ರತಿಭಟನೆ ನಡೆಸಲಾಯಿತು.ಪಟ್ಟಣದ ಶ್ರೀ ಗುಂಜ ನರಸಿಂಹಸ್ವಾಮಿ ದೇವಾಲಯದ ಮುಂಬಾಗ ಜೈ ಕನ್ನಡಾಂಬೆ ಮಹಾಸೇನೆ (ರಿ) ಕಾರ್ಯಕರ್ತರು, ಮುಖಂಡರು ಜಮಾವಣೆಗೊಂಡು ಪ್ರತಿಭಟನೆ ಮೆರವಣಿಗೆ ಹೊರಟು ಪಟ್ಟಣದ ಪ್ರಮುಖ ಬೀದಿಗಳಾದ ಭಗವಾನ್ ವೃತ್ತ, ಖಾಸಗಿ ಬಸ್ ಸ್ಟ್ಯಾಂಡ್ ವೃತ್ತ, ವಿದ್ಯೋದಯ ಕಾಲೇಜು ವೃತ್ತದ ಮಿನಿ ಪ್ರತಿಭಟನೆ ಮೆರವಣಿಗೆ ನಡೆಸಿ ನಿರಂತರವಾಗಿ ನಡೆಯುತ್ತಿರುವ ಮಕ್ಕಳು ಮತ್ತು ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲಬೇಕು ಎಂದು ಒತ್ತಾಯಿಸಿ ಘೋಷಣೆ ಕೂಗಿ ತಾಲೂಕು ಕಚೇರಿವರೆಗೆ ಪ್ರತಿಭಟನೆ ಮೆರವಣಿಗೆ ನಡೆಸಿದರು.ಪ್ರತಿಭಟನೆಯನ್ನು ಉದ್ದೇಶಿಸಿ ಮಾತ ನಾಡಿದ ಜೈ ಕನ್ನಡಾಂಬೆ ಮಹಾಸೇನೆ ತಾಲೂಕು ಘಟಕದ ಅಧ್ಯಕ್ಷೆ ಶೋಭಾ, ರಾಜ್ಯ ಹಾಗೂ ಜಿಲ್ಲೆಯಲ್ಲಿ ಮಹಿಳೆಯರು. ಮಕ್ಕಳು ಮತ್ತು ವಯೋವೃದ್ಧರ ಮೇಲಿನ ದೌರ್ಜನ್ಯ ಪ್ರಕರಣ ಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಯಾಗಿದೆ.ಮಹಿಳೆಯರ ಸುರಕ್ಷತೆಯನ್ನು ಖಾತ್ರಿ ಪಡಿಸುವುದು ಸರ್ಕಾರದ ಮೊದಲ ಆದ್ಯತೆ ಯಾಗಬೇಕು. ದೌರ್ಜನ್ಯ ಎಸಗುವವರ ವಿರುದ್ಧ ಕಾನೂನಿನ ಭಯ ಮೂಡಿಸುವ ರೀತಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ತಾಲೂಕಿನಲ್ಲಿಯೂ ಮಹಿಳೆಯರ ಮೇಲಿನ ದೌರ್ಜನ್ಯ ಹಾಗೂ ಕಿರುಕುಳ ಪ್ರಕರಣಗಳು ಳಕಿಗೆ ಬರುತ್ತಿದ್ದರೂ ಸಂಬಂಧಪಟ್ಟ ಅಧಿಕಾರಿ ಗಳು ಸಮರ್ಪಕ ಗಮನ ಹರಿಸುತ್ತಿಲ್ಲ. ಇಂತಹ ನಿರ್ಲಕ್ಷ÷್ಯದಿಂದ ತಪ್ಪಿತಸ್ಥರ ಧೈರ್ಯ ಹೆಚ್ಚಾಗುತ್ತಿದೆ. ಮಹಿಳೆಯರು ಹಾಗೂ ಮಕ್ಕಳಿಗೆ ನ್ಯಾಯ ದೊರಕಿಸುವ ನಿಟ್ಟಿನಲ್ಲಿ ತಾಲೂಕು ಆಡಳಿತತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಮಹಿಳೆ ಯರಿಗೆ ಅಗತ್ಯ ಆರೋಗ್ಯ ಸೇವೆಗಳು ಸಮರ್ಪಕ ವಾಗಿ ದೊರೆಯುತ್ತಿಲ್ಲ. ಮಹಿಳೆಯರು, ಹೆಣ್ಣು ಮಕ್ಕಳು ಹಾಗೂ ವಯೋವೃದ್ಧರ ಮೇಲೆ ನಡೆಯುತ್ತಿರುವ ದೈಹಿಕ ಮತ್ತು ಮಾನಸಿಕ ದೌರ್ಜನ್ಯ ಪ್ರಕರಣಗಳನ್ನು ಆಡಳಿತ ಗಂಭೀರ ವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗು ವಂತೆ ಕ್ರಮವಹಿಸಬೇಕು ಎಂದು ಒತ್ತಾಯಿ ಸಿದರು.ಸಂಘಟನೆಯ ಪ್ರಧಾನ ಕಾರ್ಯದರ್ಶಿ ಶೃತಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಅಮಾಯಕ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವುದು ಇಡೀ ಸಮಾಜ ವನ್ನು ಬೆಚ್ಚಿಬೀಳಿಸುವ ಸಂಗತಿಯಾಗಿದೆ. ಇಂತಹ ಅಮಾನವೀಯ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಸಹಿಸಲಾಗದು. ಮಹಿಳೆಯರಿಗೆ ಸರ್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳು ಹಾಗೂ ಪುರಸಭೆ ವ್ಯಾಪ್ತಿಯಲ್ಲಿ ದೊರೆಯ ಬೇಕಾದ ಮೂಲಭೂತ ಸೌಲಭ್ಯಗಳು ಸಮರ್ಪಕ ವಾಗಿ ತಲುಪುವಂತೆ ಅಧಿಕಾರಿಗಳು ಕ್ರಮವಹಿಸ ಬೇಕು ಎಂದು ಒತ್ತಾಯಿಸಿದರು.ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ಬರುವ ರೋಗಿಗಳಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ದೊರಕುತ್ತಿಲ್ಲ. ರಾತ್ರಿಯ ಪಾಳಿಯಲ್ಲಿ ಒಬ್ಬರು ವೈದ್ಯರು ಇರುತ್ತಾರೆ ಹೆಚ್ಚಿನ ರೋಗಿಗಳು ಬಂದಾಗ ಚಿಕಿತ್ಸೆ ನೀಡಲು ತೊಂದರೆ ಆಗುತ್ತದೆ. ಮತ್ತು ರಾತ್ರಿ ಪಾಳಿಯದಲ್ಲಿ ಬರುವ ರೋಗಿಗಳನ್ನು ಮೈಸೂರುಗೆ ರವಾನಿಸುತ್ತಾರೆ. ಆಸ್ಪತ್ರೆಗೆ ಹೆಚ್ಚುವರಿ ವೈದ್ಯರನ್ನು ನೇಮಿಸಿ ಸಾರ್ವಜನಿಕರಿಗೆ ಸಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡುವಂತೆ ಒತ್ತಾಯಿಸಿದರು. ಈ ಸಂದರ್ಭ ಪ್ರತಿಭಟನೆಯಲ್ಲಿ ಸಂಘದ ರಾಜ್ಯ ಸಂಸ್ಥಾಪಕ ಎಸ್.ಸತೀಶ್, ಕೋಶಾಧ್ಯಕ್ಷ ಹರೀಶ್, ಇಂದು ಮತಿ,ರಮೇಶ್, ಸುರೇಶ್, ಗಿರೀಶ್, ಗೋಪಾಲ್,ಮಲ್ಲೇಶ್, ತಾಲೂಕು ಘಟಕದ ಅಧ್ಯಕ್ಷ ಎಂ.ಮಾದೇಶ್, ಉಪಾಧ್ಯಕ್ಷ ಕೃಷ್ಣ, ನಂದೀಶ್,ಸುಭಾಷ್, ರಾಮು,ರವಿ,ಮಹಿಳಾ ಘಟಕದ ಗೌರವಾಧ್ಯಕ್ಷೆ ಸುಶೀಲಮ್, ಸಹ ಪ್ರಧಾನ ಕಾರ್ಯದರ್ಶಿ ಕಾಂಚನ, ಕಾರ್ಯದರ್ಶಿ ಬಿ. ಮಂಜುಳಾ,ಸಹ ಕಾರ್ಯದರ್ಶಿ ಸಹನ, ಸಂಘಟನಾ ಕಾರ್ಯದರ್ಶಿ ಸವಿತಾ.ಸೌಮ್ಯ.ಸ ನ್ನಿಧಿ.ವಸಂತ,ಮಾನ್ವಿತ,ಇಂಚರ,ಜ್ಯೋತಮ್ಮ,ಲಕ್ಷ÷್ಮಮ್ಮ, ಸುಮ, ಸುಂದ್ರಮ್ಮ.ನಾಗರತ್ನ ಸೇರಿದಂತೆ ಇನ್ನಿತರರು ಹಾಜರಿದ್ದರು. ಪಟ್ಟಣದ ಶ್ರೀ ಗುಂಜಾ ನರಸಿಂಹಸ್ವಾಮಿ ದೇವಸ್ಥಾನದ ಮುಂಭಾಗ ಸಂಘಟನೆಯ ಕಾರ್ಯಕರ್ತರು ಮತ್ತು ಮಹಿಳೆಯರು ಹಾಗೂ ಟ್ರಾನ್ಸ್ ಜೆಂಡರ್ ಸಮುದಾಯದ ಸದಸ್ಯರು ಜಮಾವಣೆ ಗೊಂಡು ಸರ್ಕಾರ ಹಾಗೂ ಆಡಳಿತದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ದರು. ಬಳಿಕ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ತಾಲೂಕು ಕಚೇರಿ,ಪುರಸಭೆ, ಪೊಲೀಸ್ ಠಾಣೆ ಹಾಗು ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಅಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಖಂಡನೆ: ಜೈ ಕನ್ನಡಾಂಬೆ ಮಹಾಸೇನೆ ತಾ. ಘಟಕದ ವತಿಯಿಂದ ಪ್ರತಿಭಟನೆ



