ನವದೆಹಲಿ: ಹೊಸದಾಗಿ ನೇಮಕಗೊಂಡ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ (ಸಿಇಒ) ರಘುರಾಮ್ ಅಯ್ಯರ್ ಮೇಲೆ ಸಂಪೂರ್ಣ ವಿಶ್ವಾಸವಿದೆ ಮತ್ತು ಉನ್ನತ ಹುದ್ದೆಗೆ ಅವರನ್ನು ನೇಮಿಸಿರುವ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ ಎಂದು ಭಾರತ ಒಲಿಂಪಿಕ್ ಸಂಸ್ಥೆ (ಐಒಎ) ಅಧ್ಯಕ್ಷೆ ಪಿ.ಟಿ.ಉಷಾ ಭಾನುವಾರ ಹೇಳಿದರು.
ರಘುರಾಮ್ ಅವರ ನೇಮಕವನ್ನು ಅನೂರ್ಜಿತ ಎಂದು ಘೋಷಿಸುವ ಅಮಾನತು ಆದೇಶಕ್ಕೆ ಐಒಎ ಕಾರ್ಯಕಾರಿ ಸಮಿತಿಯ ಹೆಚ್ಚಿನ ಸದಸ್ಯರು ಸಹಿ ಹಾಕಿದ್ದಾರೆ ಎಂದು ವರದಿಗಳು ಹೇಳಿದ್ದವು. ಐಒಎ ಜನವರಿ 6 ರಂದು ರಾಜಸ್ಥಾನ ರಾಯಲ್ಸ್ನ ಮಾಜಿ ಅಧಿಕಾರಿ ಅಯ್ಯರ್ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಿಸಿತ್ತು.
ಆದರೆ, ಕಾರ್ಯಕಾರಿ ಸಮಿತಿಯ ಹಲವಾರು ಸದಸ್ಯರು, ಸಿಇಒ ಆಗಿ ಅಯ್ಯರ್ ಅವರನ್ನೇ ಶಿಫಾರಸು ಮಾಡಲು ಉಷಾ ತಮ್ಮ ಮೇಲೆ ಒತ್ತಡ ಹೇರಿದ್ದಾರೆ ಎಂದು ಆರೋಪಿಸಿದರು. ಈ ಆರೋಪವನ್ನು ಉಷಾ ‘ನಾಚಿಕೆ ಗೇಡಿನದು’ ಎಂದು ಟೀಕಿಸಿದ್ದರು.