ತಿರುವನಂತಪುರಂ: ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ (೬೪) ನಿಧನರಾಗಿದ್ದಾರೆ.
ತಡರಾತ್ರಿ ೧ ಗಂಟೆ ಸುಮಾರಿಗೆ ತಿಕ್ಕೋಡಿ ಪೆರುಮಾಳ್ ಪುರಂನಲ್ಲಿ ರುವ ಅವರ ನಿವಾಸದಲ್ಲಿ ಕುಸಿದು ಬಿದ್ದಿದ್ದರು. ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಅವರನ್ನು ರಕ್ಷಿಸಲು ಸಾಧ್ಯವಾಗಲಿಲ್ಲ ಕುಟುಂಬಸ್ಥರು ತಿಳಿಸಿದ್ದಾರೆ.
ಘಟನೆಯ ಸಮಯದಲ್ಲಿ ಉಷಾ ಅವರು ಮನೆಯಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದೆ.
ಶ್ರೀನಿವಾಸನ್ ಅವರು ಕೇರಳದ ಮಲಪುö್ಪರಂ ಜಿಲ್ಲೆಯ ಪೊನ್ನಾನಿಯ ಕುಟ್ಟಿಕ್ಕಾಡ್ನ ವೆಂಗಲಿ ಥರಾವದ್ನ ನಾರಾಯಣನ್ ಮತ್ತು ಸರೋಜಿನಿ ದಂಪತಿಯ ಪುತ್ರ. ಅವರು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ ಡೆಪ್ಯೂಟಿ ಎಸ್ಪಿಯಾಗಿ ನಿವೃತ್ತರಾಗಿದ್ದರು. ೧೯೯೧ ರಲ್ಲಿ ದೂರದ ಸಂಬAಧಿಯಾಗಿದ್ದ ಪಿ.ಟಿ. ಉಷಾ ಅವರನ್ನು ವಿವಾಹವಾಗಿದ್ದರು. ದಂಪತಿಗೆ ಡಾ. ಉಜ್ವಲ್ ವಿಘ್ನೇಶ್ ಎಂಬ ಮಗನಿದ್ದಾನೆ.
ಪಿ.ಟಿ. ಉಷಾ ಪತಿ ಶ್ರೀನಿವಾಸನ್ ನಿಧನ



