ಬೆಂಗಳೂರು: ಕಳೆದ ಮಾರ್ಚ್ ತಿಂಗಳಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಕೆಎಸ್‍ಇಎಬಿ ಅಧ್ಯಕ್ಷ ಡಾ. ರಾಮಚಂದ್ರನ್ ಇಂದು ಸುದ್ದಿಗೋಷ್ಠಿಯಲ್ಲಿ ಪರೀಕ್ಷಾ ಫಲಿತಾಂಶ ಪ್ರಕಟಿಸಿದ್ದಾರೆ. ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕಲಾ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 1,34,876. ಕಲಾ ವಿಭಾಗದಲ್ಲಿ ಶೇಕಡಾ 61.22ರಷ್ಟು ಫಲಿತಾಂಶ ಬಂದಿದೆ. ಒಟ್ಟು 61 ಕೇಂದ್ರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು. ಒಟ್ಟು 7,02,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು
ದಕ್ಷಿಣ ಕನ್ನಡ ಜಿಲ್ಲೆ ಶೇ.95.33 ಫಲಿತಾಂಶ ಗಳಿಸುವ ಮೂಲಕ ಪ್ರಥಮ ಸ್ಥಾನದಲ್ಲಿದ್ದರೆ ಶೇ. 95.24 ಫಲಿತಾಂಶದ ಮೂಲಕ ಉಡುಪಿ ಜಿಲ್ಲೆ ಎರಡನೇ ಸ್ಥಾನದಲ್ಲಿ, ಶೇ.90.55 ಫಲಿತಾಂಶದ ಮೂಲಕ ಕೊಡುಗು ಮೂರನೇ ಸ್ಥಾನದಲ್ಲಿದ್ದು, ಉತ್ತರ ಕನ್ನಡ ಜಿಲ್ಲೆ ನಾಲ್ಕನೆ ಸ್ಥಾನದಲ್ಲಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 9ನೇ ಸ್ಥಾನ, ಬೆಂಗಳೂರು ದಕ್ಷಿಣ ಜಿಲ್ಲೆ 10 ಹಾಗೂ ಉತ್ತರ ಜಿಲ್ಲೆ 11ನೇ ಸ್ಥಾನದಲ್ಲಿ. ಯಾದಗಿರಿ ಜಿಲ್ಲೆಕಡೆಯ ಸ್ಥಾನದಲ್ಲಿದೆ. ವಿಜ್ಞಾನ ವಿಭಾಗದಲ್ಲಿ 207087 ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ. 85.71 ಫಲಿತಾಂಶ ಲಭ್ಯವಾಗಿದೆ.
ವಾಣಿಜ್ಯ ವಿಭಾಗದಲ್ಲಿ ಶೇ.75.89 ಫಲಿತಾಂಶ ಲಭ್ಯವಾಗಿದೆ. ಕಲಾವಿಭಾಗದಲ್ಲಿ ಬೆಂಗಳೂರಿನ ಎನ್.ಎಂ.ಕೆ.ಆರ್‍ವಿ ಕಾಲೇಜಿನ ವಿದ್ಯಾರ್ಥಿ ತಬಸುಮ್ 600ಕ್ಕೆ 593 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದ್ದಾರೆ. ಮೂಡುಬಿದಿರಿ ಆಳ್ವಾಸ್ ವಿದ್ಯಾರ್ಥಿನಿ ಅನನ್ಯ 600ಕ್ಕೆ 600 ಅಂಕ ಪಡೆದು ವಾಣಿಜ್ಯ ವಿಭಾಗದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದ್ದಾರೆ.
ಕೋಲಾರ ಜಿಲ್ಲೆ ಶ್ರೀನಿವಾಸಪುರದ ಗಂಗೋತ್ರಿ ಕಾಲೇಜಿನ ಕೌಶಿಕ್ 600ಕ್ಕೆ 596 ಅಂಕ ಪಡೆದು ವಿಜ್ಞಾನ ವಿಭಾಗದಲ್ಲಿ ಪ್ರಥಮ ಸ್ಥಾನದಲ್ಲಿದ್ದಾರೆ.
Leave a Review