ದಾವಣಗೆರೆ: ಹವಾಮಾನ ಬದಲಾವಣೆಯನ್ನು ತಡೆಗಟ್ಟುವುದು ಮತ್ತು ಅದರ ದುಷ್ಪರಿಣಾಮಗಳನ್ನು ಕಡಿಮೆಗೊಳಿಸುವುದು ಇಂದಿನ ತುರ್ತು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಸಾರ್ವಜನಿಕರಲ್ಲಿ ವ್ಯಾಪಕ ಜಾಗೃತಿ ಮೂಡಿಸುವುದು ಅತ್ಯಂತ ಮುಖ್ಯ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೇ ಮಾಧವ ವಿಠ್ಠಲರಾವ್ ಅವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಏರ್ಪಡಿಸಿದ್ದ ಹವಾಮಾನ ಬದಲಾಣೆ ಕುರಿತು ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ರಾಜ್ಯ ಸರ್ಕಾರವು ಅತ್ಯಂತ ದೂರದೃಷ್ಟಿಯಿಂದ ರೂಪಿಸಿರುವ ‘ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ’ಯ ಯಶಸ್ವಿ ಅನುಷ್ಠಾನಕ್ಕೆ ಸರ್ಕಾರದ ಎಲ್ಲಾ ಇಲಾಖೆಗಳ ಸಕ್ರಿಯ ಸಹಭಾಗಿತ್ವ ಮತ್ತು ಒಗ್ಗಟ್ಟಿನ ಶ್ರಮ ಅತ್ಯಗತ್ಯ, ಹವಾಮಾನ ವೈಪರೀತ್ಯದ ಸವಾಲುಗಳನ್ನು ಕೇವಲ ಒಂದು ಇಲಾಖೆ ಎದುರಿಸಲು ಸಾಧ್ಯವಿಲ್ಲ. ಹೀಗಾಗಿ, ತರಬೇತಿಯಲ್ಲಿ ಭಾಗವಹಿಸಿರುವ ವಿವಿಧ ಇಲಾಖೆಗಳ ಅಧಿಕಾರಿಗಳು ಇಲ್ಲಿ ಪಡೆದ ಜ್ಞಾನವನ್ನು ಬಳಸಿಕೊಂಡು, ತಮ್ಮ ತಮ್ಮ ಕಾರ್ಯಕ್ಷೇತ್ರಗಳಲ್ಲಿ ಯೋಜನೆಯ ಮೂಲ ಉದ್ದೇಶಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ತಳಮಟ್ಟದಲ್ಲಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಮಲ್ಲಾ ನಾಯಕ್ ಅವರು ಮಾತನಾಡಿ, ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (ಎಂಪ್ರಿ), ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸರ್ಕಾರದ ಸ್ವಾಯತ್ತ ಸಂಸ್ಥೆಯಾಗಿದ್ದು, ಕರ್ನಾಟಕ ಸರ್ಕಾರದ ನಿರ್ದೇಶನದಂತೆ “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ (ಏSಂPಅಅ)”ಯನ್ನು ಸಿದ್ಧಪಡಿಸಿದೆ. ಈ ಯೋಜನೆಗೆ 2024ರಲ್ಲಿ ಕೇಂದ್ರ ಅರಣ್ಯ, ಪರಿಸರ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅನುಮೋದನೆ ದೊರೆತಿದೆ. ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆಯಡಿ ವಿವಿಧ ಇಲಾಖೆಗಳು 2025-2030ರ ಅವಧಿಗೆ ಪ್ರಮುಖ ಕಾರ್ಯಕ್ಷಮತಾ ಸೂಚಕಗಳು ಹಾಗೂ ಗುರಿಗಳನ್ನು ನಿಗದಿಪಡಿಸಿದ್ದು, ಅವುಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಪಾಲುದಾರ ಸಂಸ್ಥೆಗಳ ಸಾಮರ್ಥ್ಯ ವೃದ್ಧಿಗೆ ಒತ್ತು ನೀಡಲಾಗಿದೆ. ಅಧಿಕಾರಿಗಳ ಕಾರ್ಯಾಗಾರದ ಪ್ರಯೋಜನೆಯನ್ನು ಪಡೆದುಕೊಂಡು ತಮ್ಮ ಕಾರ್ಯಕ್ಷೇತ್ರದಲ್ಲಿ ಕಾರ್ಯಗತಗೊಳಿಸುವಂತೆ ತಿಳಿಸಿದರು.
ಎಂಪ್ರಿ ಸಂಸ್ಥೆಯ ಸಂಶೋಧನಾ ವಿಜ್ಞಾನಿ ಡಾ. ಪವಿತ್ರಾ ಪಿ. ನಾಯಕ್ ಅವರು “ಕರ್ನಾಟಕ ರಾಜ್ಯ ಹವಾಮಾನ ಬದಲಾವಣೆಯ ಕ್ರಿಯಾ ಯೋಜನೆ” ಕುರಿತು ಉಪನ್ಯಾಸ ನೀಡಿದರು ಎಸಿಐಡಬ್ಲ್ಯುಆರ್ಎಂ , ಬೆಂಗಳೂರು ಸಂಸ್ಥೆಯ ಸಂಶೋಧನಾ ವಿಜ್ಞಾನಿ ತೇಜು ಕುಮಾರ್ ಅವರು ಜಲ ಸಂಪನ್ಮೂಲ ವಲಯಕ್ಕೆ ಸಂಬAಧಿಸಿದ ಹವಾಮಾನ ಕ್ರಿಯಾ ಯೋಜನೆ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯತ್ ಆನಂದ್ ಅವರು ಎನ್.ಆರ್.ಡಿ.ಎಂ.ಎಸ್. ಕುರಿತು ಮತ್ತು ಜಿಲ್ಲಾಧಿಕಾರಿಗಳ ಕಚೇರಿಯ ವಿದ್ಯಾಧರ ಅವರು ವಿಪತ್ತು ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.
ಕೃಷಿ ಜಂಟಿ ನಿರ್ದೇಶಕ ಜಿಯಾವುಲ್ಲಾ, ಯೋಜನಾ ನಿರ್ದೇಶಕ ವೀರೇಶ್, ಮೀನುಗಾರಿಕೆ ಇಲಾಖೆಯ ಉಪ ನಿರ್ದೇಶಕ ಅಣ್ಣಪ್ಪ ಎಂಪ್ರಿ ಸಂಸ್ಥೆಯ ರುಚಿತಾ, ರಾಘವೇಂದ್ರ ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
`ಹವಾಮಾನ ಬದಲಾವಣೆ ತಡೆಗೆ ಇಲಾಖೆಗಳ ಸಮನ್ವಯದೊಂದಿಗೆ ಜನಜಾಗೃತಿ ಅಗತ್ಯ’



