ದೇವನಹಳ್ಳಿ: ಪುನೀತ್ ರಾಜಕುಮಾರ್ ಕನ್ನಡ ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ತಮ್ಮ ಜೀವನದಲ್ಲಿ ಮಾಡಿರುವ ಸಮಾಜಮುಖಿ ಕಾರ್ಯಗಳು ಇಂದಿಗೂ ಮಾದರಿಯಾಗಿದೆ ಎಂದು ಮಾಜಿ ಪುರಸಭಾ ಸದಸ್ಯ ದೇವರಾಜ್ ತಿಳಿಸಿದರು. ಪಟ್ಟಣದ ಗಿರಿಯಮ್ಮ ಸರ್ಕಲ್ನಲ್ಲಿ ಡಾಕ್ಟರ್ ಅಂಬೇಡ್ಕರ್ ಭವನದ ಮುಂದೆ ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗ ಮತ್ತು ಆಟೋ ಚಾಲಕರು ಹಾಗೂ ಮಾಲೀಕರು ವತಿಯಿಂದ ಹಮ್ಮಿಕೊಂಡಿದ್ದ ಕನ್ನಡ ಚಿತ್ರರಂಗ ಹಾಗೂ ಕನ್ನಡ ರತ್ನ ಪುನೀತ್ ರಾಜಕುಮಾರ್ ಅವರ 51 ಹುಟ್ಟು ಹಬ್ಬದ ಅಂಗವಾಗಿ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗದ ಪ್ರವೀಣ್ ಕುಮಾರ್ ಮಾತನಾಡಿ, ಪುನೀತ್ ರಾಜಕುಮಾರ್ ಅವರ ಆದರ್ಶಗಳನ್ನು ಇಂದಿನ ಯುವಕರು ಅಳವಡಿಸಿಕೊಳ್ಳಬೇಕು. ಜೊತೆಗೆ ಬಡ ಜನರಿಗೆ ಹಲವು ಸೇವಾ ಕಾರ್ಯಕ್ರಮಗಳನ್ನು ಕೈಗೊಂಡು ಇತರರಿಗೆ ಮಾದರಿ ಯಾಗಿದ್ದಾರೆ. ಪುನೀತ್ ರಾಜಕುಮಾರ್ ಅವರಂತೆ ಬಡವರ ಕಷ್ಟಗಳಿಗೆ ತಾವು ಕೂಡ ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಇದೇ ವೇಳೆ ಅಲ್ಲಿಗೆ ಬಂದ ಸಾರ್ವಜನಿಕ ರಿಗೆ ಸಿಹಿ ತಿಂಡಿ ಅನ್ನಸಂತಪಣೆಯನ್ನು ಮಾಡಿದರು. ಮಾಜಿ ಪುರಸಭಾ ಸದಸ್ಯ ದೇವರಾಜ್, ಪುನೀತ್ ರಾಜಕುಮಾರ್ ಅಭಿಮಾನಿಗಳ ಬಳಗದ ಪ್ರವೀಣ್ ಕುಮಾರ್, ಭಾರ್ಗವ್, ಮತ್ತು ಗಿರಿಯಮ್ಮ ಸರ್ಕಲ್ಲಿನ ಆಟೋ ಚಾಲಕರು ಮಾಲೀಕರು ಇದ್ದರು.



