ಬೆಂಗಳೂರು: ಪೊಲೀಸ್ ಸಬ್ ಇನ್ಸಪೆಕ್ಟರ್ ಮರು ಪರೀಕ್ಷೆ ನಡೆಸುವಂತೆ ಹೈಕೋರ್ಟ್ನ ಆದೇಶದ ಸಂಪೂರ್ಣ ಪ್ರತಿಯನ್ನು ನಾನು ನೋಡಿಲ್ಲ. ನಮ್ಮ ಅಡ್ವೊಕೇಟ್ ಜನರಲ್ ಜೊತೆ ಫೋನ್ನಲ್ಲಿ ಮಾತಾಡಿದ್ದೇನೆ.
ಸ್ವತಂತ್ರ ಸಂಸ್ಥೆಯಿಂದ ಬೇಗ ಪರೀಕ್ಷೆ ನಡೆಸಲು ಕೋರ್ಟ್ ಹೇಳಿದೆ. ಮುಂದಿನ ಸೋಮವಾರ ಅಥವಾ ಮಂಗಳವಾರ ಆದೇಶ ಪ್ರತಿ ಕೈ ಸೇರಲಿದೆ. ತದನಂತರ ಕ್ರಮ ತೆಗೆದುಕೊಳ್ಳುತ್ತೇವೆ. ಪಿಎಸ್ಐ ಪರೀಕ್ಷಾರ್ಥಿಗಳು ಓದಲು ಸಮಯ ಕೊಡಿ ಅಂತಿದ್ದಾರೆ. ಅದನ್ನು ಪರಿಗಣಿಸುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.
ನೇಮಕಾತಿ ಬಳಿಕ ಅವರಿಗೆ ತರಬೇತಿ ನೀಡಲು 1 ವರ್ಷ ಆಗಲಿದೆ. ರೂಲ್ 32ರಲ್ಲಿ 500 ರಿಂದ 600 ಎಎಸ್ಐಗಳಿಗೆ ಬಡ್ತಿ ನೀಡಿದ್ದೇವೆ. 545 ಹುದ್ದೆಗಳ ಜೊತೆಗೆ ಇನ್ನೂ 400 ಪಿಎಸ್ಐ ಹುದ್ದೆಗಳು ಖಾಲಿಯಿವೆ. ಎರಡನ್ನೂ ಒಟ್ಟಿಗೆ ಮಾಡಬೇಕಾ ಅಥವಾ ಪ್ರತ್ಯೇಕವಾಗಿ ನಡೆಸಬೇಕಾ ಎಂದು ಚರ್ಚೆ ನಡೆಸುತ್ತಿದ್ದೇವೆ. ಇಲಾಖೆಯಗೆ ಒಳ್ಳೆಯದಾಗಿದೆ ಎಂದು ಹೇಳಿದರು.