ಚಿತ್ರದುರ್ಗ: ಚಿತ್ರದುರ್ಗ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ದೊರೆಯುತ್ತದೆ ಎಂದು ನಿರೀಕ್ಷೆಯಲ್ಲಿದ್ದ ರಘುಆಚಾರ್ ಇದೀಗ ಕಾಂಗ್ರೆಸ್ ಟಿಕೆಟ್ ದೊರೆಯದ ಪರಿಣಾಮ ತೀವ್ರ ಅಸಮಾಧಾನಗೊಂಡು ಜೆಡಿಎಸ್‍ನತ್ತ ಮುಖಮಾಡಿದ್ದಾರೆ ಎನ್ನಲಾಗಿದೆ.
ಈಗಾಗಲೇ ರಘುಆಚಾರ್ ಅವರು ಜೆಡಿಎಸ್‍ನ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮಾತುಕತೆ ನಡೆಸಿದ್ದು, ಜೆಡಿಎಸ್ ಪಕ್ಷ ಸೇರಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಇದೇ ತಿಂಗಳು 14ರಂದು ರಘು ಆಚಾರ್ ಅವರು ಜೆಡಿಎಸ್ ಸೇರಬಹುದು ಎಂದು ಹೇಳಲಾಗುತ್ತಿದೆ.
Leave a Review