ಹನ್ನೆರಡು ವರ್ಷಗಳ ಹಿಂದೆ ರಾಗಿಣಿ ಅವರು ನಾಯಕಿಯಾಗಿ ನಟಿಸಿದ್ದ “ರಾಗಿಣಿ ಐಪಿಎಸ್” ಚಿತ್ರ ಭರ್ಜರಿ ಯಶಸ್ಸು ಕಂಡಿತ್ತು. ಈಗ ಈ ಚಿತ್ರದ ಮುಂದುವರಿದ ಭಾಗ “ರಾಗಿಣಿ ಐಪಿಎಸ್ 2” ಚಿತ್ರ ಸಹ ಆರಂಭವಾಗಲಿದೆ. ನಟಿ ರಾಗಿಣಿ ದ್ವಿವೇದಿ ಹುಟ್ಟುಹಬ್ಬಕ್ಕೆ ಈ ಸಿನಿಮಾ ಘೋಷಣೆಯಾಗಿದೆ.ಜಗ್ಗೇಶ್ ಅವರ ಪುತ್ರರಾದ ಗುರುರಾಜ್ ಹಾಗೂ ಯತಿರಾಜ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ನಟರಾಗಿ ಜನಪ್ರಿಯರಾಗಿದ್ದ ಗುರುರಾಜ್ ಹಾಗೂ ಯತಿರಾಜ್ ಈ ಸಿನಿಮಾ ಮೂಲಕ ನಿರ್ದೇಶಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಕೆ.ಮಂಜು ಹಾಗೂ ರಾಗಿಣಿ ವೆಂಚರ್ಸ್ ಜಂಟಿಯಾಗಿ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ. “ರಾಗಿಣಿ ಐಪಿಎಸ್” ಜನಪ್ರಿಯ ಚಿತ್ರ. “ರಾಗಿಣಿ ಐಪಿಎಸ್” ಚಿತ್ರದ ಮುಂದುವರಿದ ಭಾಗ. ಕಥೆ ಕೂಡ ಆ ಚಿತ್ರದ ಕಥೆ ಎಲ್ಲಿ ಕೊನೆಯಾಗಿತ್ತೊ, ಅಲ್ಲಿಂದಲೇ ಮುಂದುವರೆಯುತ್ತದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡುವುದಾಗಿ ನಿರ್ದೇಶಕರಾದ ಗುರುರಾಜ್ ಹಾಗೂ ಯತಿರಾಜ್ ತಿಳಿಸಿದರು. ರಾಗಿಣಿ ಉತ್ತಮ ನಟಿ. ಇತ್ತೀಚೆಗೆ ಅವರು ಫೋನ್ ಮಾಡಿ ನಿಮಗೆ ಕಥೆ ಹೇಳಲು ನಿರ್ದೇಶಕರು ಬರುತ್ತಿದ್ದಾರೆ ಅಂತ ಹೇಳಿದರು. ಯಾರು ಎಂದು ಹೇಳಲಿಲ್ಲ. ಆನಂತರ ಜಗ್ಗೇಶ್ ಅವರ ಮಕ್ಕಳಾದ ಗುರುರಾಜ್ – ಯತಿರಾಜ್ ಬಂದು “ರಾಗಿಣಿ ಐಪಿಎಸ್ 2” ಚಿತ್ರದ ಕಥೆ ಹೇಳಿದರು. ಕಂಟೆAಟ್ ಚೆನ್ನಾಗಿದೆ. ರಾಗಿಣಿ ವೆಂಚರ್ಸ್ ನಿರ್ಮಾಣಕ್ಕೆ ಜೊತೆಯಾಗಿದ್ದಾರೆ. ಆದಷ್ಟು ಬೇಗ ಚಿತ್ರಕ್ಕೆ ಚಾಲನೆ ಸಿಗಲಿದೆ ಎಂದರು ನಿರ್ಮಾಪಕ ಕೆ.ಮಂಜು.



