ಬೆಂಗಳೂರು : ಪಕ್ಷ ವಿರೋಧಿ ಹಾಗೂ ಪಕ್ಷಕ್ಕೆ ಮುಜುಗರ ತರುವಂತಹ ಹೇಳಿಕೆ ನೀಡಿದ್ದರಿಂದ ಈ ಹಿಂದೆ ಮಾಜಿ ಸಚಿವ ಕೆ. ಎನ್ ರಾಜಣ್ಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ಬೆನ್ನಲ್ಲೇ ಇದೀಗ ಪಕ್ಷವಿರೋಧಿ ಹಾಗೂ ಮುಜುಗರ ತರುವಂತ ಹೇಳಿಕೆ ನೀಡಿದ್ದರಿಂದ ರಾಜು ಕಾಗೆ ಅವರನ್ನು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ತೆಗೆದುಹಾಕಲಾಗಿದೆ ಎಂದು ಹೇಳಲಾಗುತ್ತಿತ್ತು. ಆದರೆ ಸಿಎಂ ಸಿದ್ದರಾಮಯ್ಯ ನಿಗಮ ಸ್ಥಾನದಿಂದ ನಿಮ್ಮನ್ನು ಕೈಬಿಟ್ಟಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರ ಪಟ್ಟಿಯಲ್ಲಿ ಇದೀಗ ಗೊಂದಲ ಉಂಟಾಗಿದೆ. ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜು ಕಾಗೆ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾಗಿದ್ದಾರೆ. ಎಐಸಿಸಿ ಬಿಡುಗಡೆಗೊಳಿಸಿದ ಪಟ್ಟಿಯಲ್ಲಿ ಅರುಣ್ ಪಾಟೀಲ್ ಹೆಸರು ಉಲ್ಲೇಖವಾಗಿದೆ. ರಾಜು ಕಾಗೆ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಬೆಂಗಳೂರಿನ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಈ ಕುರಿತು ಚರ್ಚಿಸಿದ್ದಾರೆ. ನಿಗಮದ ಅಧ್ಯಕ್ಷ ಸ್ಥಾನದಿಂದ ನಿಮ್ಮನ್ನು ಕೈಬಿಟ್ಟಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.