ಬೆಂಗಳೂರು: ರಾಜ್ಯದಿಂದ ರಾಜ್ಯ ಸಭೆಯ ನಾಲ್ಕು ಸ್ಥಾನಗಳಿಗೆ ಅಧಿಕೃತವಾಗಿ ಚುನಾವಣೆ ಅಧಿಸೂಚನೆ ಹೊರಬಿದ್ದಿದ್ದು, ನಾಮಪತ್ರ ಸಲ್ಲಿಸಲು ಎಂಟನೇ ತಾರೀಕು ಸೋಮವಾರ ಕೊನೆಯ ದಿನವಾಗಿದೆ.
ಈಗಾಗಲೆ ಕಾಂಗ್ರೆಸ್ ಪಕ್ಷ ತನಗೆ ಲಭ್ಯವಾಗುವ ಮೂರು ಸ್ಥಾನಗಳಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಮನ್ಸೂರ್ ಅಲಿಖಾನ್, ಪವನ್ ಖೇರಾ ಅವರ ಹೆಸರುಗಳನ್ನು ಘೋಷಣೆ ಮಾಡಿದೆ.
ಆದರೆ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಅಧಿಕೃತ ಅಭ್ಯರ್ಥಿಯನ್ನು ಇದುವರೆಗೂ ಘೋಷಣೆ ಮಾಡಿಲ್ಲ. ಮಾಜಿ ಸಂಸದೆ ಸುಮಲತಾ ಅವರು ಅಭ್ಯರ್ಥಿಯಾಗಲು ತೀವ್ರ ಯತ್ನ ನಡೆಸಿದ್ದಾರೆ.
ಕಳೆದ ಎರಡು ವರ್ಷಗಳಿಂದ ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸದೆ ಇದ್ದ ಅವರು ಇದೀಗ ಚುನಾವಣೆ ಸಂದರ್ಭದಲ್ಲಿ ಟಿಕೆಟ್ಗಾಗಿ ವರಿಷ್ಠರ ಮೇಲೆ ಹೇರುತ್ತಿದ್ದಾರೆ ಎನ್ನಲಾಗಿದೆ.
ರಾಜ್ಯಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಕುತೂಹಲ



