ನವದೆಹಲಿ: ದೇಶದ 10 ರಾಜ್ಯಗಳ ಒಟ್ಟು 37 ರಾಜ್ಯಸಭಾ ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ಪೈಕಿ ಬಿಹಾರದ ರಾಜಕೀಯ ಬೆಳವಣಿಗೆಗಳು ಹೆಚ್ಚು ಗಮನ ಸೆಳೆಯುತ್ತಿದ್ದು, ಮುಖ್ಯಮಂತ್ರಿ ನಿತೀಶ್ ಕುಮಾರ್ ಹಾಗೂ ಬಿಜೆಪಿ ರಾಷ್ಡ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರು ಮೇಲ್ಮನೆ ಪ್ರವೇಶಿಸಲು ಕಣಕ್ಕಿಳಿದಿದ್ದಾರೆ.
ಮಹಾರಾಷ್ಟ್ರ (7), ತಮಿಳುನಾಡು (6), ಬಿಹಾರ (5), ಪಶ್ಚಿಮ ಬಂಗಾಳ (5), ಒಡಿಶಾ (4), ಅಸ್ಸಾಂ (3), ತೆಲಂಗಾಣ (2), ಛತ್ತೀಸ್ಗಢ (2), ಹರಿಯಾಣ (2) ಮತ್ತು ಹಿಮಾಚಲ ಪ್ರದೇಶದ 1 ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ.
ಈಗಾಗಲೇ ಕೆಲವು ರಾಜ್ಯಗಳಲ್ಲಿ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗುವ ಮುನ್ಸೂಚನೆ ಇದ್ದರೂ, ಬಿಹಾರ, ಒಡಿಶಾ ಮತ್ತು ಹರಿಯಾಣದಂತಹ ರಾಜ್ಯಗಳಲ್ಲಿ ಹೆಚ್ಚಿನ ಅಭ್ಯರ್ಥಿಗಳು ಕಣದಲ್ಲಿರುವುದರಿಂದ ಮತದಾನ ಅನಿವಾರ್ಯವಾಗಿದೆ.
ಬಿಹಾರದಲ್ಲಿ 5 ಸ್ಥಾನಗಳಿಗಾಗಿ ಚುನಾವಣೆ ನಡೆಯುತ್ತಿದೆ.



