This is the title of the web page
This is the title of the web page

ರಮೇಶ್ ಅರವಿಂದ್, ಗೋಲ್ಡನ್ ಸ್ಟಾರ್ ಗಣೇಶ್ ಜೋಡಿಯ ಹೊಸ ಚಿತ್ರಕ್ಕೆ ವಿಖ್ಯಾತ್ ನಿರ್ದೇಶನ

ಕನ್ನಡ ಚಿತ್ರರಂಗಕ್ಕೆ ವಿಖ್ಯಾತ್ ಚಿತ್ರ ಪ್ರೊಡಕ್ಷನ್ಸ್ ಮೂಲಕ ಪುಷ್ಪಕ ವಿಮಾನ, ಇನ್ಸ್ ಪೆಕ್ಟರ್ ವಿಕ್ರಂ, ಮಾನ್ಸೂನ್ ರಾಗದಂಥ ವಿಭಿನ್ನ ಶೈಲಿಯ ಚಿತ್ರಗಳನ್ನು ಕೊಡುಗೆಯಾಗಿ ನೀಡಿದ ನಿರ್ಮಾಪಕ ವಿಖ್ಯಾತ್ ತಮ್ಮ ಸಂಸ್ಥೆಯ ನಿರ್ಮಾಣದ ಆರನೇ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ತಮ್ಮ ಪ್ರಥಮ ಪ್ರಯತ್ನದಲ್ಲೇ ಮಲ್ಟಿ ಸ್ಟಾರ್ ಚಿತ್ರ ನಿರ್ದೇಶನಕ್ಕೆ ಕೈಹಾಕಿದ್ದಾರೆ.

ಸ್ಟಾರ್ ನಟರಾದ ರಮೇಶ್ ಅರವಿಂದ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಇಬ್ಬರನ್ನೂ ನಾಯಕರನ್ನಾಗಿಟ್ಟುಕೊಂಡು ದೇಶ ಕಾಯುವ ವೀರಯೋಧರ ಕುರಿತಾಗಿ ಒಂದಷ್ಟು ಮಹತ್ವದ ವಿಚಾರಗಳನ್ನು ಹೇಳಲು ಹೊರಟಿದ್ದಾರೆ.

ನಟ ರಮೇಶ್ ಅರವಿಂದ್ ಅವರ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಹೊಸ ಪೋಸ್ಟರನ್ನು ಬಿಡುಗಡೆ ಮಾಡಲಾಗಿದ್ದು, ಈ ಪೋಸ್ಟರ್ ಸಾಕಷ್ಟು ಕುತೂಹಲಗಳನ್ನು ಹುಟ್ಟುಹಾಕಿದೆ. ಇದರಲ್ಲಿ ವೀರ ಸೇನಾನಿಗಳ ನಡುವೆ ನಾಯಕರಿಬ್ಬರೂ ವಿದೂಷಕರ ಗೆಟಪ್ ನಲ್ಲಿ ಕಾಣಿಸಿಕೊಂಡಿದ್ದಾರೆ, ಈಗ ಉದ್ಭವಿಸಿರುವ ಎಲ್ಲಾ ಕುತೂಹಲಗಳಿಗೆ ನಿರ್ದೇಶಕನ ಕ್ಯಾಪ್ ತೊಟ್ಟಿರುವ ವಿಖ್ಯಾತ್ ಅವರೇ ಉತ್ತರ ನೀಡಬೇಕಿದೆ.