ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಇಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಮುಖ್ಯಮಂತ್ರಿಯವರ ಆರ್‍ಟಿನಗರದ ನಿವಾಸಕ್ಕೆ ಭೇಟಿ ನೀಡಿದ್ದ ರಮೇಶ್ ಜಾರಕಿಹೊಳಿ ಕೆಲಕಾಲ ಮುಖ್ಯಮಂತ್ರಿಯವರೊಂದಿಗೆ ಮಾತುಕತೆ ನಡೆಸಿ ತೆರಳಿರುವುದು ತೀವ್ರ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.
ತಮ್ಮಮೇಲಿನ ಸಿಡಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಮೇಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಮಾಡಿರುವ ಆರೋಪ ಸಂಬಂಧ ಸಿಬಿಐ ತನಿಖೆಗೆ ವಹಿಸಲು ಇಂದು ರಾಜ್ಯಕ್ಕೆ ಆಗಮಿಸುತ್ತಿರುವ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಗಮನಕ್ಕೆ ತರಬೇಕು ಎಂದು ಮುಖ್ಯಮಂತ್ರಿಯವರೊಂದಿಗೆ ಸಮಾಲೋಚನೆ ಸಂದರ್ಭದಲ್ಲಿ ತಿಳಿಸಿದ್ದಾರೆ ಎಂದು ಹೇಳಲಾಗುತ್ತಿದೆ.
Leave a Review