ದಾವಣಗೆರೆ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿರುವ ಘಟನೆ ದಾವಣಗೆರೆ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
17 ವರ್ಷದ ಬಾಲಕಿಯ ಮನೆ ಪಕ್ಕದ ಶಾಮಿಯಾನ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ, ಆಕೆಯನ್ನು ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗಿದ್ದು ಆರೋಪಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.
17ರ ಹರೆಯದ ಅಪ್ರಾಪ್ತ ಬಾಲಕಿ ಜೊತೆ ಸ್ನೇಹ ಮಾಡಿದ ಆರೋಪಿ, ಆಕೆಯನ್ನು ಪುಸಲಾಯಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಎಸಗಿ ತಲೆಮರಸಿಕೊಂಡಿದ್ದಾನೆ.
ಅಪ್ರಾಪ್ತೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಆಸ್ಪತ್ರೆಗೆ ದಾಖಲಿಸಿದ್ದು ಆಸ್ಪತ್ರೆಗೆ ಹೋದಾಗ ಅಪ್ರಾಪ್ತೆ ಗರ್ಭಿಣಿಯಾಗಿರುವ ವಿಚಾರ ಬೆಳಕಿಗೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸಂತ್ರಸ್ತೆ ತಂದೆ ಪ್ರಕರಣ ದಾಖಲಿಸಿದ್ದು ದೂರಿನ ಮೇರೆಗೆ ಪೋಕ್ಸೋ ಪ್ರಕರಣ ದಾಖಲಿಸಿ ತಲೆಮರೆಸಿಕೊಂಡ ಆರೋಪಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
Leave a Review