ನವದೆಹಲಿ: ಕಳೆದ 10 ವರ್ಷಗಳಲ್ಲಿ ದೇಶದ ಅಭಿವೃದ್ಧಿ ಕ್ಷಿಪ್ರ ಪ್ರಗತಿಯಲ್ಲಿ ಸಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅಭಿಪ್ರಾಯಪಟ್ಟಿದ್ದಾರೆ.
ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪದಲ್ಲಿ ಜನರಿಗೆ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಸಂಸತ್ತಿನಲ್ಲಿ ಇಂದು ನಡೆದ ಸಂಸತ್ ಜಂಟಿ ಅಧಿವೇಶನದಲ್ಲಿ ಮಾತನಾಡಿ, ಕೆಲವೇ ಜನರಿಗೆ ದೇಶ ಸೇವೆ ಮಾಡುವ ಮತ್ತು ಜನರ ಸೇವೆ ಮಾಡುವ ಅವಕಾಶ ಸಿಗುತ್ತದೆ. ಮತದಾರರ ವಿಶ್ವಾಸ ಗಳಿಸಿ ನೀವೆಲ್ಲರೂ ಇಲ್ಲಿಗೆ ಬಂದಿದ್ದೀರಿ,18ನೇ ಲೋಕಸಭೆಗೆ ಹೊಸದಾಗಿ ಆಯ್ಕೆಯಾದ ಎಲ್ಲ ಸದಸ್ಯರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ಹೇಳಿದರು. ಹತ್ತು ವರ್ಷಗಳಲ್ಲಿ ಮಾಡಿರುವ ಬದಲಾವಣೆಯಿಂದ ಇದೆಲ್ಲ ಸಾಧ್ಯವಾಗಿದೆ. ಭಾರತವನ್ನು ಮೂರನೇ ಆರ್ಥಿಕತೆಯನ್ನಾಗಿ ಮಾಡುವಲ್ಲಿ ಸರ್ಕಾರ ತೊಡಗಿಸಿ ಕೊಂಡಿದೆ ಎಂದರು.
ಪ್ರಸ್ತುತ ದಿನಗಳಲ್ಲಿ ಸಾವಯವ ಉತ್ಪನ್ನಗಳಿಗೆ ವಿಶ್ವದಲ್ಲಿ ವೇಗವಾಗಿ ಬೇಡಿಕೆ ಹೆಚ್ಚುತ್ತಿದೆ. ಈ ಬೇಡಿಕೆಯನ್ನು ಪೂರೈಸಲು ಭಾರತೀಯ ರೈತರು ಅಪಾರ ಸಾಮಥ್ರ್ಯವನ್ನು ಹೊಂದಿದ್ದಾರೆ. ಸರ್ಕಾರ ಖಾರಿಫ್ ಬೆಳೆಗಳ ಎಂಎಸ್ಪಿಯನ್ನೂ ಹೆಚ್ಚಿಸಿದೆ. ನಾವು ಹೆಚ್ಚು ಹೆಚ್ಚು ಸ್ವಾವಲಂಬಿಗಳಾಗಬೇಕು ಎಂಬ ಕಲ್ಪನೆಯನ್ನು ಇಟ್ಟುಕೊಂಡು ನೀತಿಯನ್ನು ರೂಪಿಸಲಾಗಿದೆ ಎಂದರು.
ಸರ್ಕಾರ ಎಲ್ಲಾ ಕ್ಷೇತ್ರಗಳ ಬಲವರ್ಧನೆಯಲ್ಲಿ ನಿರತವಾಗಿದೆ. ಕಳೆದ ಹತ್ತು ವರ್ಷಗಳಲ್ಲಿ ಗ್ರಾಮೀಣ ಆರ್ಥಿಕತೆಗೆ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇಡೀ ದೇಶದಲ್ಲಿ ಲೋಕಸಭೆ ಚುನಾವಣೆ ಚರ್ಚೆಯಾಗುತ್ತಿದೆ. ಜನರು ಸತತ ಮೂರನೇ ಬಾರಿಗೆ ಸ್ಥಿರ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಎಂದು ಜಗತ್ತು ಗಮನಿಸುತ್ತಿದೆ. ಜನರು ಮೂರನೇ ಬಾರಿಗೆ ಸರ್ಕಾರದ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಬಾರಿ ಮಹಿಳೆಯರೇ ಅಧಿಕ ಸಂಖ್ಯೆಯಲ್ಲಿ ಮತದಾನದಲ್ಲಿ ಭಾಗವಹಿಸಿರುವುದು ಹೆಮ್ಮೆಯ ವಿಷಯವಾಗಿದೆ ಎಂದಿದ್ದಾರೆ. ಈ ಬಾರಿಯ ಬಜೆಟ್ ಐತಿಹಾಸಕ ಬಜೆಟ್ ಆಗಲಿದೆ. ಭಾರತವು ಸ್ಥಿರ ಮತ್ತು ಸ್ಪಷ್ಟ ಬಹುಮತದ ಸರ್ಕಾರ ಹೊಂದಿದೆ. ಭಾರತವು ಆರ್ಥಿಕತೆಯಲ್ಲಿ ವೇಗವಾಗಿ ಬೆಳೆಯುತ್ತಿರುವ ರಾಷ್ಟ್ರವಾಗಿದೆ. ಹಲವು ನಗರಗಳಲ್ಲಿ ಮೆಟ್ರೋ ಯೋಜನೆ ಅಸ್ಥಿತ್ವವದಲ್ಲಿದೆ.
ಮಹಾನಗರಗಳಲ್ಲಿ ಮೆಟ್ರೋ ಯೋಜನೆ ವಿಸ್ತರಣೆ ಮಾಡಲಾಗುವುದು. ನಗರಗಳಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ಮಹಾನಗರಗಳಲ್ಲಿ ಹೈಸ್ಪೀಡ್ ರೈಲು ಯೋಜನೆಗೆ ಒತ್ತು ನೀಡಲಾಗಿದೆ. ಪ್ರತಿಕ್ಷೇತ್ರದಲ್ಲೂ ಸಹ ಭಾರತ ವಿಶೇಷ ಸಾಧ್ಯತೆ. ರೈತರಿಗಾಗಿ ಸರ್ಕಾರಿ ಸಂಸ್ಥೆಗಳ ಯೋಜನೆ ಮಾಡಲಾಗುತ್ತಿದೆ. ಸಹಕಾರಿ ವ್ಯವಸ್ಥೆಯಲ್ಲೂ ದೊಡ್ಡ ಬದಲಾವಣೆಯಾಗುತ್ತಿದೆ ಎಂದು ರಾಷ್ಟ್ರಪತಿಯವರು ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ಕಾರ್ಯ ಯೋಜನೆಗಳ ಬಗ್ಗೆ ಪ್ರಸ್ತಾಪ ಮಾಡಿದ್ದಾರೆ.