ಚೆನ್ನೈ: ಇಂದಿನಿಂದ ಐಪಿಎಲ್ ಪ್ರಾರಂಭವಾಗಲಿದ್ದು, ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಶ್ರೀಮಂತ ಕ್ರಿಕೆಟ್ ಲೀಗ್ ಎಂದೇ ಖ್ಯಾತಿ ಪಡೆದಿರುವ ಐಪಿಎಲ್ನ ಮೊದಲ ಪಂದ್ಯದಲ್ಲಿ ಕ್ಯಾಪ್ಟನ್ ಕೂಲ್ ಎಂ ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಖಮುಖಿಯಾಗಲಿದೆ.
ಚೆನ್ನೈ ಸೂಪರ್ ಕಿಂಗ್ ತಂಡ ಐಪಿಎಲ್ನಲ್ಲಿ ಒಟ್ಟರೆ ಐದು ಬಾರಿ ಟ್ರೋಫಿ ಎತ್ತಿ ಹಿಡಿದಿದ್ದರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ 16 ವರ್ಷಗಳಿಂದ ಒಮ್ಮೆಯೂ ಕಪ್ಪು ಗೆಲ್ಲಲು ಸಾಧ್ಯವಾಗಿಲ್ಲ, ವುಮೆನ್ಸ್ ಪ್ರೀಮಿಯರ್ ಲೀಗ್ ನಲ್ಲಿ ಇತ್ತೀಚಿಗಷ್ಟೇ ಆರ್ಸಿಬಿ ತಂಡ ಚಾಂಪಿಯನ್ ಆಗಿದ್ದು, ಈ ಬಾರಿಯ ಪುರುಷರ ಐಪಿಎಲ್ ನಲ್ಲಿ ಆರ್ಸಿಬಿ ತಂಡ ಮೊದಲ ಬಾರಿ ಟ್ರೋಫಿ ಎತ್ತಿ ಹಿಡಿಯಲಿದೆಯಾ ಕಾದು ನೋಡಬೇಕಾಗಿದೆ.
ಉಭಯ ತಂಡಗಳು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಇದುವರೆಗೆ 8 ಪಂದ್ಯಗಳಲ್ಲಿ ಮುಖಾಮುಖಿಯಾಗಿದೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್ ತಂಡವು 7 ಬಾರಿ ಭರ್ಜರಿ ಜಯ ಸಾಧಿಸಿದೆ. ಇನ್ನು ಆರ್ಸಿಬಿ ತಂಡ ಗೆದ್ದಿರುವುದು ಕೇವಲ 1 ಬಾರಿ ಮಾತ್ರ. ಅದು ಕೂಡ 2008 ರಲ್ಲಿ. ಇದಾದ ಬಳಿಕ ಚೆನ್ನೈನಲ್ಲಿ ಸಿಎಸ್ಕೆ ವಿರುದ್ಧ ಆರ್ಸಿಬಿ ಗೆಲುವಿನ ನಗೆ ಬೀರಿಲ್ಲ.