ಬೆಂಗಳೂರು: ವಿಷ್ಣುವರ್ಧನ್ಗೆ ಕರ್ನಾಟಕ ರತ್ನ ಬೆನ್ನಲ್ಲೇ ಅಂಬರೀಶ್ ಗೆ ಕರ್ನಾಟಕ ರತ್ನ ನೀಡಲು ಒತ್ತಾಯ ಕೇಳಿಬಂದಿದೆ.
ಹಿರಿಯ ನಟಿ ತಾರಾ ಅನುರಾಧ ಅವರು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಸದಾಶಿವನಗರದ ಡಿಕೆ ಶಿವಕುಮಾರ್ ನಿವಾಸದಲ್ಲಿ ತಾರಾ ಅನುರಾಧ ಭೇಟಿ ಮಾಡಿ ಅಂಬರೀಷ್ ಗೆ ಕರ್ನಾಟಕ ರತ್ನ ನೀಡಬೇಕು ಎನ್ನೋದು ಅವರ ಅಭಿಮಾನಿಗಳ ಒತ್ತಾಸೆ ನೀವು ಅವರನ್ನು ಹತ್ತಿರದಿಂದ ಕಂಡಿದ್ದೀರಿ. ಹಿರಿಯ ಕಲಾವಿದರಿಗೆ ಗೌರವ ಸಲ್ಲಿಸಿ ಎಂದು ಪತ್ರದ ಮೂಲಕ ಒತ್ತಾಯಿಸಿದ್ದಾರೆ.
ರೆಬಲ್ ಸ್ಟಾರ್ ಅಂಬರೀಷ್ಗೂ ಕರ್ನಾಟಕ ರತ್ನ ಪ್ರಶಸ್ತಿಗೆ ಒತ್ತಾಯ
