ಬೆಂಗಳೂರು: ರಾಜ್ಯ ಉಚ್ಛನ್ಯಾಯಾಲಯದ ಆದೇಶದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತ ಮರುಎಣಿಕೆ ನಡೆದಿದೆ.
ಹೈಕೋರ್ಟ್ ಆದೇಶದಂತೆ ಇಂದು ಶೃಂಗೇರಿಯ ಐಡಿಎಸ್ಆರ್ಜಿ ಕಾಲೇಜಿನಲ್ಲಿ ಬೆಳಿಗ್ಗೆ 9 ಗಂಟೆಯಿAದ ಎಣಿಕಾ ಕಾರ್ಯ ನಡೆದಿದೆ.
2023ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ ರಾಜೇಗೌಡ ಅವರು ಬಿಜೆಪಿಯ ಜೀವರಾಜ್ ವಿರುದ್ಧ 201 ಮತಗಳಿಂದ ಜಯಗಳಿಸಿದ್ದರು. ಇದನ್ನು ಪ್ರಶ್ನಿಸಿ ಜೀವ್ರಾಜ್ ಅವರು ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅಂಚೆ ಮತ ಮರು ಎಣಿಕೆ ನಡೆಸಲು ಆದೇಶಿಸಿತ್ತು.
ನ್ಯಾಯಾಲಯದ ಆದೇಶದಂತೆ ಇಂದು ಎಣಿಕಾ ಕಾರ್ಯ ನಡೆಯುತ್ತಿದೆ. ಒಟ್ಟು ಚುನಾವಣೆಯಲ್ಲಿ 1822 ಅಂಚೆ ಮತಗಳು ಚಲಾವಣೆಯಾಗಿದ್ದವು. ಇಂದು ಮತ ಎಣಿಕೆ ಹಿನ್ನೆಯಲ್ಲಿ ಮತ ಎಣಿಕೆ ನಡೆಯುತ್ತಿರುವ ಮತ ಎಣಿಕೆ ಕೇಂದ್ರದ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಮರು ಮತ ಎಣಿಕೆಗೆ ವಿರೋಧ ವ್ಯಕ್ತಪಡಿಸಿರುವ ಜಯಗಳಿಸಿರುವ ಅಭ್ಯರ್ಥಿ ರಾಜೇಗೌಡ ಅವರು ಹಲವು ಬೇಡಿಕೆಯುಳ್ಳ ಮನವಿ ಪತ್ರವನ್ನು ಎಣಿಕ ಅಧಿಕಾರಿಗೆ ಸಲ್ಲಿಸಿದ್ದಾರೆ.
ಅಂಚೆ ಮತ ಮರು ಎಣಿಕೆ ನ್ಯಾಯಾಲಯದ ಆದೇಶದಂತೆ ನಡೆದಿದೆ ಶೃಂಗೇರಿ ಕ್ಷೇತ್ರದ ಎಣಿಕಾಕಾರ್ಯ



