ಬೆಂಗಳೂರು ನಗರ ಜಿಲ್ಲೆ: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಅಧ್ಯಯನ ಮಾಡಿ 2023ರಲ್ಲಿ ತೇರ್ಗಡೆಯಾಗಿ 180 ದಿನ ಕಳೆದರೂ ಉದ್ಯೋಗ ಲಭಿಸದ ಪದವಿಧರ ನಿರುದ್ಯೋಗಿಗಳ (ವೃತ್ತಿಪರ ಕೋರ್ಸ್ ಗಳು ಸೇರಿದಂತೆ) ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ನೋಂದಾಯಿಸಿಕೊಳ್ಳಬಹುದು.
ಪದವೀಧರ ಪಾಸಾದ ನಿರುದ್ಯೋಗ ಭತ್ಯೆ ಪ್ರತಿ ತಿಂಗಳು ರೂ. 3000 ಹಾಗೂ ಡಿಪ್ಲೋಮಾ ಪಾಸಾದ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು ರೂ. 1500 ನಿರುದ್ಯೋಗ ಭತ್ಯೆಯನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ ಎರಡು ವರ್ಷಗಳ ಅವಧಿಯವರೆಗೆ ನೀಡಲಾಗುತ್ತದೆ.
ಪದವಿ/ಡಿಪ್ಲೋಮಾ ನಂತರ ಉನ್ನತ ವ್ಯಾಸಂಗಕ್ಕೆ ದಾಖಲಾತಿ ಹೊಂದಿ ವಿದ್ಯಾಬ್ಯಾಸ ಮುಂದುವರೆಸುತ್ತಿರುವವರು, ಶಿಶಿಕ್ಷು ವೇತನವನ್ನು ಪಡೆಯುತ್ತಿರುವವರು, ಸರ್ಕಾರಿ/ಖಾಸಗಿ ವಲಯದಲ್ಲಿ ಉದ್ಯೋಗ ಪಡೆದಿರುವವರು, ರಾಜ್ಯ ಹಾಗೂ ಕೇಂದ್ರದ ವಿವಿಧ ಯೋಜನೆಯಡಿ ಹಾಗೂ ಬ್ಯಾಂಕ್ಗಳಲ್ಲಿ ಸಾಲ ಪಡೆದು ಸ್ವಯಂ ಉದ್ಯೋಗ ಹೊಂದಿರುವವರು ಹಾಗೂ ಕರ್ನಾಟಕದಲ್ಲಿ ಕನಿಷ್ಠ ಆರು ವರ್ಷಗಳಿಗಿಂತ ಕಡಿಮೆ ವಾಸವಿಲ್ಲದಿರುವ ಅಭ್ಯರ್ಥಿಗಳು ಯುವನಿಧಿ ಯೋಜನೆಗೆ ಆರ್ಹರಾಗುವುದಿಲ್ಲ.
ಆಸಕ್ತ ಅಭ್ಯರ್ಥಿಗಳು www.sevasindhugs.karnataka.gov.in ನಲ್ಲಿ ನೋಂದಾಯಿಸಿಕೊಳ್ಳಬಹುದು.ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1800-599-9918 ಅನ್ನು ಸಂಪರ್ಕಿಸಬಹುದು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕಛೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.