ದೊಡ್ಡಬಳ್ಳಾಪುರ: ಜನವರಿ 2024 ಕ್ಕೆ 18 ವರ್ಷ ತುಂಬುವ ಪ್ರತಿಯೊಬ್ಬರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೊಂದಾಯಿಸಿ ಜವಬ್ದಾರಿಯುತ ಯುವ ಮತದಾರರಾಗಿ ಚುನಾವಣೆಯಲ್ಲಿ ಮತ ಚಲಾಯಿಸುವ ಮೂಲಕ ಪ್ರಜಾ ಪ್ರಭುತ್ವವನ್ನು ಬಲಪಡಿಸಬೇಕು. ಈ ನಿಟ್ಟಿನಲ್ಲಿ ಯುವಕರ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ತಿಳಿಸಿದರು.
ನಗರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ, ಯುವ ಮತದಾರರ ನೋಂದಣಿ ಅಂಗವಾಗಿ ದೊಡ್ಡಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೊಂಗಾಡಿಯಪ್ಪ ಕಾಲೇಜು, ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಆರ್ ಎಲ್ ಜಾಲಪ್ಪ ಕಾಲೇಜುಗಳಿಗೆ ಮತ್ತು ಮತಗಟ್ಟಗಳಿಗೆ ಭೇಟಿ ನೀಡಿ ಯುವ ಮತದಾರರ ನೋಂದಣಿ ಪ್ರಕ್ರಿಯೆಯನ್ನು ಪರಿಶೀಲಿಸಿ, ಮಾತನಾಡಿ ಯಾವುದೇ ಅರ್ಹ ವ್ಯಕ್ತಿ ಮತದಾನದಿಂದ ಹೊರಗಿರಬಾರದು, ಮತದಾನದಿಂದ ವಂಚಿತರಾಗಬಾರದು, ಶುದ್ದ ಮತದಾರರ ಪಟ್ಟಿ ತಯಾರಿಸುವುದು ಮತ್ತು 100% ಮತದಾನ ಚುನಾವಣಾ ಆಯೋಗದ ಗುರಿಯಾಗಿದೆ ಎಂದು ತಿಳಿಸಿದರು.
ಪರಿಷ್ಕರಣೆ ಇನ್ನೂ 2 ದಿನಗಳ ಕಾಲ ನಡೆಯಲಿದ್ದು ಃಐಔ ಗಳು ಮನೆ ಮನೆಗೆ ಭೇಟಿ ನೀಡಿ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಜನರು ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಿಕೊಳ್ಳಬೇಕು.ಇದಕ್ಕಾಗಿ ಚುನಾವಣಾ ಆಯೋಗದ ಗಿಊಂ ಆಪ್ ಬಳಸಲು ಸಲಹೆ ನೀಡಿದರು.
ಕಾರ್ಯನಿರ್ವಾಹಕ ಅಧಿಕಾರಿ ಎನ್. ಮುನಿರಾಜು ಮಾತನಾಡಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ಯುವ ಮತದಾರರ ನೋಂದಣಿ ಅಭಿಯಾನ ಹಮ್ಮಿಕೊಂಡಿದ್ದು, 17 ವರ್ಷ ತುಂಬಿದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ನೋಂದಾಯಿಸಿಕೊಳ್ಳುವ ಮೂಲಕ ಶೇ.100 ರಷ್ಟು ಮತದಾರರ ನೋಂದಣಿಯಾಗಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಅಸಿಸ್ಟೆಂಟ್ ಕಮೀಷನರ್ ಎಂ. ಶ್ರೀನಿವಾಸ್, ತಹಸೀಲ್ದಾರ್ ವಿಭಾ ವಿದ್ಯಾ ರಾಥೋಡ್, ನಗರಸಭೆ ಪೌರಾಯುಕ್ತರಾದ ಪರಮೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ರಂಗಪ್ಪ, ಸಹಾಯಕ ನಿರ್ದೇಶಕರು (ಪಂ.ರಾ) ಕುಮಾರ್, ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಾಲೇಜುಗಳ ಪ್ರಾಂಶುಪಾಲರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.