ಬೆಂಗಳೂರು : ನಿಯಮ ಉಲ್ಲಂಘನೆ ಹಾಗೂ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯದೆ ಕನ್ನಡ ಬಿಗ್ ಬಾಸ್ ಆರಂಭಿಸಿದ ಹಿನ್ನೆಲೆಯಲ್ಲಿ ನಿನ್ನೆ ಕಂದಾಯ ಅಧಿಕಾರಿಗಳು ಹಾಗೂ ಪೊಲೀಸರ ಸಮ್ಮುಖದಲ್ಲಿ ಬೆಂಗಳೂರು ದಕ್ಷಿಣ ತಹಶೀಲ್ದಾರ್ ಜಾಲಿವುಡ್ ಸ್ಟುಡಿಯೋಗೆ ಬೀಗ ಜಡಿದಿದ್ದರು. ಇದೀಗ ವೆಲ್ಸ್ ಸ್ಟುಡಿಯೋಸ್ ರವರು ೧೫ ದಿನಗಳ ಕಾಲ ಅವಕಾಶ ನೀಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದು ಮನವಿ ಮಾಡಿಕೊಂಡಿದ್ದರು. ಹಾಗಾಗಿ ಬಿಗ್ ಬಾಸ್ ಶೋಗೆ ೧೦ ದಿನಗಳ ಕಾಲ ರಿಲೀಫ್ ಸಿಕ್ಕಿದ್ದು, ಜಿಲ್ಲಾಡಳಿತ ೧೦ ದಿನಗಳ ಕಾಲಾವಕಾಶ ನೀಡಿದೆ. ಯಾವ ನಿಯಮ ಪಾಲನೆ ಆಗಿಲ್ಲ ಅದೆಲ್ಲವನ್ನು ಸರಿಪಡಿಸುತ್ತೇವೆ ಎಂದು ವೆಲ್ಸ್ ಸ್ಟುಡಿಯೋಸ್ ಡಿಸಿಗೆ ಪತ್ರ ಬರೆದು ಮನವಿ ಮಾಡಿದ್ದು ಹಾಗಾಗಿ ಜಿಲ್ಲಾಡಳಿತ ೧೦ ದಿನಗಳ ಕಾಲ ಅವಕಾಶ ನೀಡಿದೆ ಎನ್ನಲಾಗುತ್ತಿದೆ.
ವೆಲ್ಸ ಸ್ಟುಡಿಯೋಗೆ ರಿಲೀಫ್ ಸಿಕ್ಕಿದೆ ಬೆಂಗಳೂರು ದಕ್ಷಿಣ ಜಿಲ್ಲಾ ಆಡಳಿತದಿಂದ ರಿಲೀಫ್ ಸಿಕ್ಕಿದೆ. ಈಗಾಗಲೇ ಬಿಡದಿ ಬೆಳೆಯುವ ಈಗಲ್ಟನ್ ರೆಸಾರ್ಟ್ ನಲ್ಲಿ
ಇರುವ ಬಿಗ್ ಬಾಸ್ ಸ್ಪರ್ಧಿಗಳು ತಂಗಿದ್ದು, ಮಧ್ಯಾಹ್ನ ೨:೦೦ ಒಳಗೆ ರಿಲೀಫ್ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಬಿಗ್ ಬಾಸ್ ಮನೆಗೆ ಬೀಗ ಜಡಿದ ಬೆನ್ನಲ್ಲೇ ಜಾಲಿವುಡ್ ಸ್ಟುಡಿಯೋ(ವೇಲ್ಸ್ ಸ್ಟುಡಿಯೋ ಆಂಡ್ ಎಂಟರ್ಟೈನ್ಮೆAಟ್ ಪ್ರೆöÊ. ಲಿ.) ಹೈಕೋರ್ಟ್ಗೆ ತುರ್ತು ಅರ್ಜಿ ಸಲ್ಲಿಸಿದೆ. ಕೋರ್ಟ್ ಈ ಅರ್ಜಿಯನ್ನು ಪುರಸ್ಕರಿಸಿದ್ದು ನ್ಯಾ.ಸೂರಜ್ ಗೋವಿಂದರಾಜ್ ಅವರ ಪೀಠ ಮಧ್ಯಾಹ್ನ ವಿಚಾರಣೆ ನಡೆಸಲಿದೆ. ಬಿಗ್ ಬಾಸ್ ಕಾರ್ಯಕ್ರಮ ಶುರುವಾಗುವ ಸಮಯದಲ್ಲೇ ನಮ್ಮ ಅಹವಾಲು ಆಲಿಸದೇ ತರಾತುರಿಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸುಮಾರು ೨ ಸಾವಿರ ಮಂದಿ ನೇರವಾಗಿ ಅಥವಾ ಪರೋಕ್ಷವಾಗಿ ತೊಡಗಿಸಿಕೊಂಡಿದ್ದಾರೆ. ವ್ಯವಹಾರಕ್ಕೆ ಹಾನಿ ಮಾಡುವ ಉದ್ದೇಶದಿಂದಲೇ ಈ ಆದೇಶ ಹೊರಡಿಸಲಾಗಿದೆ. ಹೀಗಾಗಿ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ತಡೆ ನೀಡಬೇಕು. ಅಷ್ಟೇ ಅಲ್ಲದೇ ಬೇರೆ ಯಾವುದೇ ಸಂಸ್ಥೆ ಹೊರಡಿಸುವ ಆದೇಶಕ್ಕೂ ತಡೆ ನೀಡಬೇಕೆಂದು ಕೋರಿ ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ಬಿಗ್ ಬಾಸ್ ಕಡೆಯಿಂದ ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ. ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ಬಾಸ್ ನಡೆಯುತ್ತಿರುವ ಕಾರಣ ವೇಲ್ಸ್ ಸ್ಟುಡಿಯೋ ಹೈಕೋರ್ಟ್ ಮೊರೆ ಹೋಗಿದೆ.