ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ ಬಂಧನವಾಗದಂತೆ ತಡೆಯಲು ಶಾಸಕರು ಮತ್ತು ಸಚಿವರು ಸರ್ಕಾರದ ಮೇಲೆ ಒತ್ತಡ ಹೇರಿದ್ದರು. ಆದರೆ ಇವರ ಪ್ರಯತ್ನ ಫಲಿಸಲಿಲ್ಲ.
ನಟ ದರ್ಶನ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ, ಪೊಲೀಸ್ ಕಸ್ಟಡಿಯಲ್ಲಿದ್ದಾರೆ.ಪೊಲೀಸರು ಆರೋಪಿ ನಟ ದರ್ಶನನ್ನು ವಿಚಾರಣೆ ನಡೆಸುತ್ತಿದ್ದಾರೆ.
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಸರ್ಕಾರ ನೇಮಿಸಿರುವ ಎಸ್ಪಿಪಿ ಪ್ರಸನ್ನಕುಮಾರ್ ಅವರು ಖಡಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಆದರೆ, ಎಸ್ಪಿಪಿ ಪ್ರಸನ್ನಕುಮಾರ್ ಅವರನ್ನು ಬದಲಾಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆಯಂತೆ. ಪ್ರಸನ್ನ ಕುಮಾರ್ ಬದಲಾವಣೆಗೆ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರಂತೆ. ಹೀಗಾಗಿ, ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ನಡೆಯುತ್ತಿದೆ ಎನ್ನಲಾಗಿದೆ. ಎಸ್ಪಿಪಿ ಪ್ರಸನ್ನಕುಮಾರ್ ಅವರನ್ನು ಬದಲಿಸಿದರೆ ಅನುಮಾನ ಬರುವ ಸಾಧ್ಯತೆ ಇರುವುದರಿಂದ, ರಾಜ್ಯ ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿಲ್ಲ ಎನ್ನಲಾಗುತ್ತಿದೆ.