ಬೆಂಗಳೂರು; ಕಳೆದ 18ರಂದು ನಡೆದ ವಿಧಾನಪರಿಷತ್ ಚುನಾವಣೆಯಲ್ಲಿ ನಡೆದ ಅಡ್ಡಮತದಾನ ಸಂಬಂಧ ಬಿಜೆಪಿಯಿಂದ ರಚಿಸಲಾಗಿದ್ದ ಸತ್ಯಶೋಧನಾ ಸಮಿತಿ ತನಿಖೆ ನಡೆಸಿ ತನ್ನ ವರದಿಯನ್ನು ಸಲ್ಲಿಸಿದೆ. ಇಂದು ಬಿಜೆಪಿ ರಾಜ್ಯ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷರಾದ ಬಿ.ವೈ. ವಿಜಯೇಂದ್ರ ಅವರಿಗೆ ವರದಿ ಸಲ್ಲಿಕೆ ಮಾಡಲಾಗಿದೆ. ಸಮಿತಿಯ ನೇತೃತ್ವ ವಹಿಸಿದ್ದ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಎನ್. ಮಹೇಶ್ ಅವರು ತಮ್ಮ ವರದಿಯನ್ನು ನೀಡಿದ್ದಾರೆ. ವರದಿ ನೀಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಿ.ಟಿರವಿ ಅವರು, ಪಕ್ಷದ ವತಿಯಿಂದ ತಮಗೆ ನಿರ್ದೇಶನ ಬಂದ ಕೂಡಲೇ ಕಾರ್ಯಾಚರಣೆ ಆರಂಭಿಸಿದ ನಾವು ಪತ್ರಿಕೆಗಳಲ್ಲಿ ಬಂದ ವರದಿ ಪಕ್ಷದ ನಾಯಕರು ನೀಡಿದ ಮಾಹಿತಿ ಮತ್ತಿತರ ಮೂಲಕಗಳಿಂದ ದೊರೆತ ಮಾಹಿತಿ ಆಧಾರದ ಮೇಲೆ ವರದಿಯನ್ನು ಸಿದ್ಧಪಡಿಸಿ ನೀಡಿದ್ದೇವೆ. 12 ಮಂದಿ ಅಡ್ಡ ಮತದಾನ ಮಾಡಿದ್ದಾರೆ. ಇದು ಪಕ್ಷದ ಆಂತರಿಕ ವರದಿಯಾದ ಕಾರಣ ಯಾವುದೇ ವಿಷಯವನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಮೇಲ್ಮನೆ ಚುನಾವಣೆಯಲ್ಲಿ ಅಡ್ಡಮತದಾನ ಬಿಜೆಪಿ ಸತ್ಯಶೋಧನಾ ಸಮಿತಿಯಿಂದ ವರದಿ ಸಲ್ಲಿಕೆ



