This is the title of the web page
This is the title of the web page

ಸಚಿವ ಕೆ.ಗೋಪಾಲಯ್ಯನವರಿಂದ ಮತ ಯಾಚನೆ

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ನಂದಿನಿ ಬಡಾವಣೆಯ ಕಂಠೀರವ ನಗರದ ಎರಡನೇ ಹಂತದಲ್ಲಿ ಮಾನ್ಯ ಸ್ಥಳಿಯ ಶಾಸಕರು ಹಾಗೂ ಅಬಕಾರಿ ಸಚಿವರಾದ ಕೆ ಗೋಪಾಲಯ್ಯನವರು ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.

ಬಿಜೆಪಿ ಸರ್ಕಾರದಿಂದ ಕ್ಷೇತ್ರದಲ್ಲಿ ಈವರೆಗೆ ಕೈಗೊಂಡಂತಹ ಉತ್ತಮ ಆಸ್ಪತ್ರೆಗಳು,ಕುಡಿಯುವ ನೀರಿನ ಘಟಕ, ನವ ನಂದಿನಿ ಪಾರ್ಕ್, ಸರ್ಕಾರಿ ಶಾಲೆ, ಮಹಾನಗರ ಪಾಲಿಕೆ ಶಾಲೆಗಳು, ಉದ್ಯಾನವನ ನಿರ್ಮಾಣ ಹಾಗೂ ಕೋವಿಡ್ ಅವಧಿಯಲ್ಲಿ ಆಹಾರ ಕಿಟ್, ಆರೋಗ್ಯ ಕಿಟ್ ರಸ್ತೆ ನಿರ್ಮಾಣ ಹೀಗೆ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮುಂದೆ ಇಟ್ಟು ಈ ಬಾರಿ ಮತ್ತೊಮ್ಮೆ ಮಹಾಲಕ್ಷ್ಮಿ ಲೇಔಟ್ ಕ್ಷೇತ್ರದಲ್ಲಿ ಬಹುಮತದಿಂದ ಗೆಲ್ಲಿಸಬೇಕಾಗಿ ಜನಸಾಮಾನ್ಯರಲ್ಲಿ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಮಾಜಿ ಶಾಸಕ ನೆಲ ನರೇಂದ್ರಬಾಬು, ಡಾಕ್ಟರ್ ಗಿರೀಶ್ ನಾಶಿ ಮಾಜಿ ಬಿಬಿಎಂಪಿ ಸದಸ್ಯ ರಾಜೇಂದ್ರ ಕುಮಾರ್, ವಾರ್ಡ್ ಅಧ್ಯಕ್ಷ ಲೋಕೇಶ್, ರೇಣುಕಾ ಆರಾಧ್ಯ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು.