ಉಡುಪಿ: ತಾವು ನಾಲ್ಕನೇ ಬಾರಿಗೆ ಪರ್ಯಾಯ ಅಲಂಕರಿಸುತ್ತಿದ್ದು, ಸನ್ಯಾಸ ಆಶ್ರಮ ಪೂರೈಸಿ 50 ವರ್ಷಗಳು ಸಂದಿರುವ ಹಿನ್ನೆಲೆಯಲ್ಲಿ ಕೃಷ್ಣನಿಗೆಚಿನ್ನದ ರಥ ಸಮರ್ಪಿಸುವ ಸಂಕಲ್ಪ ಹೊಂದಿದ್ದೇನೆ ಎಂದು ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ತಿಳಿಸಿದ್ದಾರೆ.
ವಿದೇಶ ಪ್ರವಾಸ ಕ್ಕಿಂತ ಕೃಷ್ಣ ಪೂಜೆಯೇ ಮುಖ್ಯವಾಗಿದ್ದು, ಈ ಎರಡು ವರ್ಷಗಳ ಪರ್ಯಾಯದ ಅವಧಿಯಲ್ಲಿ ಸಂಪೂರ್ಣ ಸಮ
ಯವನ್ನು ಕೃಷ್ಣನ ಪೂಜೆಗೆ ಮೀಸಲಿಡುವೆ.ಪುತ್ತಿಗೆ ಪರ್ಯಾಯ ವಿಶ್ವ ಗೀತ ಪರ್ಯಾಯ ವಾಗಿರಲಿದೆ ಎಂದು ಶ್ರೀಗಳು ಹೇಳಿದ್ದಾರೆ.
ಪರ್ಯಾಯ ಮಹೋತ್ಸವಕ್ಕೆ ಸಹಕರಿಸಿದ ಸಚಿವೆ ಲಕ್ಷ್ಮಿ ಆರ್ ಹೆಬ್ಬಾಳ್ಕರ್ ಅವರಿಗೆ ಪುತ್ತಿಗೆ ಮಠಾಧೀಶರಾದ ಇದೇ ಸಂದರ್ಭದಲ್ಲಿ ಶ್ರೀಗಳು ಅಭಿನಂದನೆ ಸಲ್ಲಿಸಿದರು. ಶ್ರೀಪುತ್ತಿಗೆ ಪರ್ಯಾಯೋತ್ಸವಕ್ಕೆ ಸಚಿವರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.
ಉಡುಪಿಯ ಶ್ರೀ ಕೃಷ್ಣ ಮಠದ ರಾಜಾಂಗಣದಲ್ಲಿ ನಡೆದ ಶ್ರೀ ಪುತ್ತಿಗೆ ಪರ್ಯಾಯೋತ್ಸವದ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಶ್ರೀ ಗಳು, ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸಚಿವರಾಗಿ ಬಂದಿರುವುದಕ್ಕಿಂತ ಹೆಚ್ಚಾಗಿ, ಕೃಷ್ಣ ಭಕ್ತೆಯಾಗಿ ಕುಟುಂಬ ಸಮೇತ ಪರ್ಯಾಯೋತ್ಸವದಲ್ಲಿ ಪಾಲ್ಗೊಂಡಿದ್ದಾರೆ. ಆರಂಭಿಕ ಹಂತದಿಂದಲೂ ಸಚಿವರು ಪರ್ಯಾಯದ ಯಶಸ್ಸಿಗೆ ಶ್ರಮಿಸಿದ್ದಾರೆ ಎಂದರು.