ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಇನ್ನೆರಡು ದಿನಗಳು ಬಾಕಿಯಿರುವ ಬೆನ್ನಲ್ಲೇ ಪ್ರಮುಖ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಬಿರುಸಾಗಿ ನಡೆಯುತ್ತಿವೆ. ಇಂದು ಸಂಜೆ ಬೆಂಗಳೂರಿನಿಂದ ಹೊರಗಿರುವ ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್ನಲ್ಲಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ಸಭೆ ನಡೆಯಲಿದೆ. ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂಜೆ 5.30ಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ರಾತ್ರಿಯೇ ಅವರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಅಡ್ಡ ಮತದಾನದ ಭೀತಿಯಿಂದ ತನ್ನ ಎಲ್ಲಾ ಶಾಸಕರನ್ನು ಒಂದೆಡೆ ಹಿಡಿದಿಟ್ಟುಕೊಳ್ಳಲು ನಡೆಸಿರುವ ಕಾರ್ಯತಂತ್ರಕ್ಕೆ ಪ್ರತಿಯಾಗಿ ಜೆಡಿಎಸ್ನಿಂದಲೂ ಸಹ ರೆಸಾರ್ಟ್ ರಾಜಕೀಯ ನಡೆಯಲಿದೆ. ನಾಳೆ ಅವರು ತನ್ನೆಲ್ಲಾ ಶಾಸಕರನ್ನು ಒಂದೆಡೆ ಸೇರಿಸಿ ಸಭೆ ನಡೆಸಲಿದ್ದಾರೆ. ತನ್ನ ಶಾಸಕರ ಸಭೆಯನ್ನು ಎಲ್ಲಿ ನಡೆಸುತ್ತಾರೆ ಎಂಬುದನ್ನು ಇನ್ನು ಬಹಿರಂಗ ಪಡಿಸಿಲ್ಲ.



