ಬೆಂಗಳೂರು: ಕರ್ನಾಟಕ ರಾಜ್ಯ ೨೦೨೫-೨೬ರ ಪೊಲೀಸ್ ಕ್ರೀಡಾಕೂಟವನ್ನು ನಿವೃತ್ತ ಪೊಲೀಸ್ ಮಹಾನಿರ್ದೇಶಕ ಡಾಕ್ಟರ್ ಅಲೋಕ್ ಮೋಹನ್ ರವರು ಇಂದು ಬೆಳಿಗ್ಗೆ ಮಡಿವಾಳದ ಕೆ ಎಸ್ ಆರ್ ಪಿ ಕ್ರೀಡಾಂಗಣದಲ್ಲಿ ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ನಿವೃತ್ತ ಡಿಜಿಪಿ ಅಲೋಕ್ ಮೋಹನ್ ಅವರು ಮಾತನಾಡುತ್ತಾ, ಪ್ರತಿಯೊಬ್ಬ ಕ್ರೀಡಾಪಟುಗಳು ಕ್ರೀಡಾಭಿಮಾನವನ್ನು ಬೆಳೆಸಿಕೊಂಡು ಉತ್ತಮ ಪೋಲಿಸ್ ಪ್ರಜೆಗಳಾಗಿ ಕರ್ತವ್ಯ ನಿರ್ವಹಿಸಬೇಕು ಮತ್ತು ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸಬೇಕೆAದು ತಿಳಿಸಿದರು.
ಮಹಿಳಾ ಮತ್ತು ಪುರುಷರ ೪೦ ಕ್ರೀಡಾ ತಂಡಗಳು ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಲಿವೆ,
ಭಾನುವಾರ ಸಮಾರೋಪ ಸಮಾರಂಭ ಜರುಗಲಿದೆ. ಸಮಾರೋಪ ಸಮಾರಂಭಕ್ಕೆ ಗೃಹ ಸಚಿವ ಡಾಕ್ಟರ್ ಜಿ ಪರಮೇಶ್ವರ್ ಭಾಗವಹಿಸಿ ಕ್ರೀಡಾಪಟುಗಳಿಗೆ ಬಹುಮಾನಗಳನ್ನು ವಿತರಿಸುವರು.
ಇಂದು ಕಾರ್ಯಕ್ರಮದಲ್ಲಿ ಪೊಲೀಸ್ ಮಹಾ ನಿರ್ದೇಶಕ ಡಾ. ಸಲೀಂ, ಡಿಜಿಪಿ ರಾಮಚಂದ್ರರಾವ್, ಬಿಜೆಪಿ ಉಮೇಶ್ ಕುಮಾರ್ ಮತ್ತು ಐಜಿಪಿ ಸಂದೀಪ್ ಪಾಟೀಲ್ ರವರು ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳ ಪೊಲೀಸ್ ಸಿಬ್ಬಂದಿಗಳು ಕ್ರೀಡಾಕೂಟದಲ್ಲಿ ಭಾಗವಹಿಸಿದ್ದಾರೆ.
ಸಾರ್ವಜನಿಕರ ಕಷ್ಟಗಳಿಗೆ ಸ್ಪಂದಿಸಬೇಕು



