ಅಯೋಧ್ಯೆ : ಅಯೋಧ್ಯೆಯ ಶ್ರೀರಾಮಮಂದಿರ ಹಣ ದುರುಪಯೋಗ ಹಿನ್ನೆಲೆಯಲ್ಲಿ ಆಡಳಿತ ಮಂಡಳಿಯನ್ನು ಬದಲಾಯಿಸಿ ಹೊಸ ವ್ಯವಸ್ಥೆ ತರಲು ತಜ್ಞರು ಸಲಹೆ ಮಾಡಿದ್ದಾರೆ. ಈಗಾಗಲೇ ಕೋಟ್ಯಂತರ ರೂಪಾಯಿ ಹಣದುರುಪಯೋಗ ಆಗಿರುವ ಹಿನ್ನೆಲೆಯಲ್ಲಿ 8 ಮಂದಿಯನ್ನು ಬಂಧಿಸಿ ಕ್ರಮ ಜರುಗಿಸಲಾಗುತ್ತಿದೆ. ಹಾಲಿ ಇಬ್ಬರು ಪ್ರಮುಖರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸಮಗ್ರವಾಗಿ ತನಿಖೆ ನಡೆಸಿ ಇರುವ ವ್ಯವಸ್ಥೆಯನ್ನು ಬದಲಾಯಿಸಲು ಮುಂದಾಗಿದ್ದಾರೆ. ತಜ್ಞರು ನೀಡಿರುವ ಸಲಹೆ ಮೇರೆಗೆ ಹೊಸ ಆಡಳಿತ ವ್ಯವಸ್ಥೆಯನ್ನು ಜಾರಿಗೆ ತರಲು ಸಿದ್ಧತೆ ನಡೆಸಲಾಗಿದೆ. ವೈಷ್ಣೋದೇವಿ ದೇಗುಲದ ಆಡಳಿತ ಮಂಡಳಿ ಹಾಗೂ ಆಂಧ್ರಪ್ರದೇಶದ ತಿರುಪತಿ ತಿರುಮಲ ದೇವಸ್ಥಾನದ ಆಡಳಿತ ಮಂಡಳಿ ಮಾದರಿಯಲ್ಲೇ ಹೊಸ ವ್ಯವಸ್ಥೆ ಜಾರಿಗೆ ತರಲು ಸಂಬಂಧಪಟ್ಟವರು ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತಿ ಹೊಂದಿರುವ ಅಯೋಧ್ಯೆ ಮಂಡಳಿಯಲ್ಲಿ ನಡೆದಿರುವ ಲೋಪಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸಂಬಂಧಪಟ್ಟವರು ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಮುಂದಾಗಿದ್ದಾರೆ. ಇತ್ತೀಚೆಗೆ ರಾಮಮಂದಿರ ಟ್ರಸ್ಟ್ನಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗವಾಗಿರುವುದರ ಬಗ್ಗೆ ಬಂದ ಆರೋಪ ಮತ್ತು ವರದಿಗಳ ಹಿನ್ನೆಲೆಯಲ್ಲಿ ತನಿಖೆ ನಡೆಸಿದಾಗ ಕಂಡುಬAದ ದೋಷಗಳ ಕಾರಣ ಟ್ರಸ್ಟ್ನ ಎಲ್ಲಾ ವ್ಯವಸ್ಥೆಯನ್ನು ಬದಲಾಯಿಸಲು ಕ್ರಮ ಜರುಗಿಸಲಾಗುತ್ತಿದೆ ಎಂದು ತಿಳಿದುಬಂದಿದೆ.



