ಬೆಂಗಳೂರು: ರಾಜ್ಯ ಬಿಜೆಪಿ ವತಿಯಿಂದ ವಿಧಾನಸಭಾ ಚುನಾವಣೆಯಲ್ಲಿ ಹಿನ್ನಡೆಯಾದ ಸಂಬಂಧ ಪರಾಮರ್ಶೆ ಸಭೆ ನಡೆದಿದೆ.
ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಈ ಬಾರಿ ಚುನಾವಣೆಯಲ್ಲಿ ನೂತನವಾಗಿ ಶಾಸಕರಾಗಿ ಆಯ್ಕೆಯಾಗಿರುವ ಸಭೆ ನಡೆದಿದ್ದು, ಮಧ್ಯಾಹ್ನ ಮೂರು ಗಂಟೆಗೆ ಪರಾಜಿತ ಅಭ್ಯರ್ಥಿಗಳ ಸಭೆ ನಡೆಯಲಿದೆ.
ಬೆಳಗ್ಗೆ ನಡೆಯುತ್ತಿರುವ ಸಭೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಆರ್. ಅಶೋಕ್, ಮಾಜಿ ಸಚಿವ ಸಿಸಿ ಪಾಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಮೊದಲಾದವರು ಪಾಲ್ಗೊಂಡಿದ್ದರು.
ಇಂದು ಸಂಜೆ ನಡೆಯಬೇಕಿದ್ದ ಬಿಜೆಪಿ ಮುಖಂಡರ ಉನ್ನತ ಮಟ್ಟದ ಸಭೆ ರದ್ದಾಗಿದೆ.ಇಂದು ಬೆಳಿಗ್ಗೆ ನಡೆಯುತ್ತಿರುವ ಸಭೆಯಲ್ಲಿ ಇತ್ತೀಚೆಗೆ ವಿಧಾನಸಭೆಯಲ್ಲಿ ಅನುಭವಿಸಿದ ಸೋಲಿನ ಬಗ್ಗೆಯೂ ಪ್ರಮುಖವಾಗಿ ಚರ್ಚೆ ನಡೆದಿದ್ದು, ಮುಂದಿನ ದಿನಗಳಲ್ಲಿ ಎದುರಾಗಲಿರುವ ಜಿ.ಪಂ., ತಾ.ಪಂ., ಬಿಬಿಎಂಪಿ ಚುನಾವಣೆ ಸೇರಿದಂತೆ ಲೋಕಸಭೆ ಚುನಾವಣೆ ಸಿದ್ದತೆ ಬಗ್ಗೆ ಸಮಾಲೋಚನೆ ನಡೆದಿದೆ.
Leave a Review