ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವನಹಳ್ಳಿ ಮತ್ತು ಚಿಕ್ಕಬಳ್ಳಾಪುರ ರಸ್ತೆಯಲ್ಲಿ ತಡ ರಾತ್ರಿ 8ರ ಸುಮಾರಿಗೆ ಲಾರಿ ಚಾಲಕ ಅತೀ ವೇಗವಾಗಿ ಚಲಾಯಿಸಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟಿರುತ್ತಾನೆ.ಅರುಣಾ(25) ಎಂಬ ಯುವಕ ಕೆಲಸ ಮುಗಿಸಿ ಮನೆಗೆ ಹೋಗುವ ಸಮಯದಲ್ಲಿ ಅಪಘಾತವಾಗಿರುತ್ತದೆ, ವಿಜಯಪುರ ಪೊಲೀಸರು ಲಾರಿ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿರುತ್ತಾರೆ.



