ಬೆಂಗಳೂರು: ಚಾಕು ತೋರಿಸಿ ದ್ವಿಚಕ್ರವಾಹನವನ್ನು ಇಬ್ಬರು ಅಪರಿಚಿತ ವ್ಯಕ್ತಿಗಳು ವ್ಯಕ್ತಿಯೊಬ್ಬರಿಂದ ದರೋಡೆ ಮಾಡಿರುವ ಘಟನೆ ತ್ಯಾಮಗೊಂಡ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಮಹಿಮಾಪುರ ಸರ್ವಿಸ್ ರಸ್ತೆಯಲ್ಲಿ ನಿನ್ನೆ ಮಧ್ಯರಾತ್ರಿ ಜರುಗಿದೆ.ಮೌನೇಶ್ ಆಚಾರ್ ಎಂಬ ವ್ಯಕ್ತಿಯು ದ್ವಿಚಕ್ರ ವಾಹನದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ಹೋಗುವ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳಿಂದ ದರೋಡೆಗೆ ಒಳಗಾಗಿರುತ್ತಾರೆ.



