ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಸೋಲನುಭವಿಸಿದೆ. ಗೆಲ್ಲಬಹುದಾಗಿದ್ದ ಪಂದ್ಯವನ್ನು ಕೇವಲ 28 ರನ್ಗಳಿಂದ ಟೀಮ್ ಇಂಡಿಯಾ ಕೈಚೆಲ್ಲಿಕೊಂಡಿದೆ. ಈ ಸೋಲಿನ ಬೆನ್ನಲ್ಲೇ ಟೆಸ್ಟ್ ಕ್ರಿಕೆಟ್ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದ ಬಗ್ಗೆ ಅಪಸ್ವರಗಳು ಕೇಳಿಬರಲಾಂಭಿಸಿದೆ.
ಏಕೆಂದರೆ ಈ ಪಂದ್ಯದ ಮೊದಲ ದಿನದಾಟದಿಂದಲೇ ಟೀಮ್ ಇಂಡಿಯಾ ಮೇಲುಗೈ ಸಾಧಿಸಿತ್ತು. ಮೊದಲ ಇನಿಂಗ್ಸ್ನಲ್ಲಿ ಇಂಗ್ಲೆಂಡ್ 246 ರನ್ ಬಾರಿಸಿದರೆ, ಭಾರತ ತಂಡ 436 ರನ್ ಪೇರಿಸಿತು. ಈ ಮೂಲಕ ಟೀಮ್ ಇಂಡಿಯಾ 190 ರನ್ಗಳ ಮುನ್ನಡೆ ಸಾಧಿಸಿತ್ತು.
ಅಂದರೆ ಇಲ್ಲಿ ಒಲೀ ಪೋಪ್ (196) ಅವರನ್ನು ಹೊರತುಪಡಿಸಿ ಉಳಿದ ನಾಲ್ವರ ವಿಕೆಟ್ ಪಡೆಯುವಲ್ಲಿ ಟೀಮ್ ಇಂಡಿಯಾ ಬೌಲರ್ಗಳು ವಿಫಲರಾಗಿದ್ದರು. ಇದಕ್ಕೆ ಮುಖ್ಯ ಕಾರಣ ರೋಹಿತ್ ಶರ್ಮಾ ಅವರ ಕಳಪೆ ನಾಯಕತ್ವ ಎಂಬ ಮಾತುಗಳು ಕೇಳಿ ಬರುತ್ತಿವೆ.
ಫೆಬ್ರವರಿ 2 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಶುರುವಾಗಲಿದ್ದು, ಈ ಪಂದ್ಯಕ್ಕೆ ವಿಶಾಖಪಟ್ಟಣಂನಲ್ಲಿ ಡಾ. ವೈಎಸ್ ರಾಜಶೇಖರ ರೆಡ್ಡಿ ಕ್ರಿಕೆಟ್ ಸ್ಟೇಡಿಯಂ ಆತಿಥ್ಯವಹಿಸಲಿದೆ. ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಕಂಬ್ಯಾಕ್ ಮಾಡುವ ನಿರೀಕ್ಷೆಯಿದೆ.