This is the title of the web page
This is the title of the web page

ಬೇಡದ ದಾಖಲೆ ಮಾಡಿದ ರೋಹಿತ್

ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ನ ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೇಡದ ದಾಖಲೆಯೊಂದನ್ನು ಮೈಮೇಲೆಳೆದುಕೊಂಡಿದ್ದಾರೆ.

ರೋಹಿತ್ ನಿನ್ನೆಯ ಪಂದ್ಯದಲ್ಲಿ ಎರಡು ಎಸೆತ ಎದುರಿಸಿ ಶೂನ್ಯಕ್ಕೆ ನಿರ್ಗಮಿಸಿದ್ದರು.ಇದು ಏಕದಿನ ಪಂದ್ಯಗಳಲ್ಲಿ ಅವರ 15 ನೇ ಡಕೌಟ್ ಆಗಿತ್ತು. ಈ ಮೂಲಕ ರೋಹಿತ್ ತಮ್ಮ ಸಹ ಆಟಗಾರ ವಿರಾಟ್ ಕೊಹ್ಲಿ ದಾಖಲೆಯನ್ನು ಸರಿಗಟ್ಟಿದರು.

ಸದ್ಯಕ್ಕೆ ರೋಹಿತ್ ಏಕದಿನ ಮಾದರಿಯಲ್ಲಿ ಶೂನ್ಯ ಸಂಪಾದನೆ ಪಟ್ಟಿಯಲ್ಲಿ ಆರನೇ ಸ್ಥಾನದಲ್ಲಿದ್ದಾರೆ. 2022 ರ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಅವರು ಕೊನೆಯ ಬಾರಿ ಶೂನ್ಯಕ್ಕೆ ಔಟಾಗಿದ್ದರು.