ಇಂಗ್ಲೆಂಡ್ ವಿರುದ್ಧದ ಕೊನೆಯ ಟೆಸ್ಟ್ ಪಂದ್ಯದಲ್ಲಿ ಹಿಟ್ಮ್ಯಾನ್ ಬ್ಯಾಟ್ನಿಂದ ಒಂದು ಸಿಕ್ಸ್ ಮೂಡಿಬಂದರೆ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಎನಿಸಿಕೊಳ್ಳಲಿದ್ದಾರೆ.
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಇದುವರೆಗೆ 31 ಪಂದ್ಯಗಳಲ್ಲಿ 53 ಇನಿಂಗ್ಸ್ ಆಡಿರುವ ರೋಹಿತ್ ಶರ್ಮಾ 49 ಸಿಕ್ಸ್ಗಳನ್ನು ಬಾರಿಸಿದ್ದಾರೆ.ಈ ಮೂಲಕ ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿದ್ದಾರೆ.ಇನ್ನು ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್ ತಂಡದ ನಾಯಕ ಬೆನ್ ಸ್ಟೋಕ್ಸ್ ಎಂಬುದು ವಿಶೇಷ. ಸ್ಟೋಕ್ಸ್ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಇದುವರೆಗೆ 44 ಪಂದ್ಯಗಳಲ್ಲಿ 81 ಇನಿಂಗ್ಸ್ ಆಡಿದ್ದಾರೆ. ಈ ವೇಳೆ 78 ಸಿಕ್ಸ್ ಸಿಡಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ರೋಹಿತ್ ಶರ್ಮಾ ಒಂದು ಸಿಕ್ಸ್ ಬಾರಿಸಿದರೆ, ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 50 ಸಿಕ್ಸ್ ಬಾರಿಸಿದ ಮೊದಲ ಭಾರತೀಯ ಹಾಗೂ ವಿಶ್ವದ 2ನೇ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ.ವಿಶೇಷ ಎಂದರೆ ಈ ಪಟ್ಟಿಯಲ್ಲಿ 5ನೇ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್ ಕೂಡ ಕಾಣಿಸಿಕೊಂಡಿದ್ದಾರೆ.
ಕೇವಲ 8 ಟೆಸ್ಟ್ ಪಂದ್ಯಗಳನ್ನಾಡಿರುವ ಜೈಸ್ವಾಲ್ ಈಗಾಗಲೇ 26 ಸಿಕ್ಸ್ಗಳನ್ನು ಸಿಡಿಸಿದ್ದಾರೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಬ್ಯಾಟರ್ಗಳ ಪಟ್ಟಿಯಲ್ಲಿ 5ನೇ ಸ್ಥಾನ ಅಲಂಕರಿಸಿದ್ದಾರೆ.