ಭಾರತ ತನ್ನ ಕೊನೆಯ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆಡಲಿದೆ. ನವೆಂಬರ್ 12 ಭಾನುವಾರದಂದು ನೆದರ್ಲೆಂಡ್ಸ್ ವಿರುದ್ಧ ಸೆಣೆಸಾಟ ನಡೆಸಲಿದೆ. ಇದೀಗ ಈ ಪಂದ್ಯಕ್ಕಾಗಿ ಭಾರತೀಯ ಆಟಗಾರರು ಸಿಲಿಕಾನ್ ಸಿಟಿಗೆ ಬಂದಿದ್ದಾರೆ.
ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದ ಬಳಿಕ ಸೋಮವಾರ ಸಂಜೆ ವೇಳೆಗೆ ಕೋಲ್ಕತ್ತಾದಿಂದ ನೇರವಾಗಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಿದರು.
ಆದರೆ, ವಿರಾಟ್ ಕೊಹ್ಲಿ ಪ್ರತ್ಯೇಕವಾಗಿ ಇವರೆಲ್ಲರಿಗಿಂತ ಮುಂಚೆ ಬೆಂಗಳೂರಿಗೆ ಬಂದಿದ್ದರು. ಎಲ್ಲ ಆಟಗಾರರು ಇಂದು ವಿಶ್ರಾಂತಿ ಪಡೆದುಕೊಳ್ಳುವ ಸಾಧ್ಯತೆ ಇದ್ದು, ನಾಳೆಯಿಂದ ಅಭ್ಯಾಸ ಶುರುಮಾಡಲಿದ್ದಾರೆ.
ಟೀಮ್ ಇಂಡಿಯಾ ಪ್ಲೇಯರ್ಸ್ಗೆ ಏರ್ಪೊರ್ಟ್ನಲ್ಲಿ ಹೂವಿನ ಹಾರ ಹಾಕಿ ವಿಶೇಷವಾಗಿ ಸ್ವಾಗತಿಸಲಾಯಿತು. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.