ಬುಧವಾರ, ಜೂನ್ 5ರಂದು ನ್ಯೂಯಾರ್ಕ್ನಲ್ಲಿ ನಡೆದ 2024ರ ಟಿ20 ವಿಶ್ವಕಪ್ನ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್ಗಳ ಗೆಲುವಿನೊಂದಿಗೆ ಟಿ20 ವಿಶ್ವಕಪ್ಟಿ20 ವಿಶ್ವಕಪ್ ಅಭಿಯಾನವನ್ನು ಶುಭಾರಂಭ ಮಾಡಿತು.ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು.
ಹೀಗಾಗಿ ಪಾಲ್ ಸ್ಟಿರ್ಲಿಂಗ್ ನಾಯಕತ್ವದ ಐರ್ಲೆಂಡ್ ಬ್ಯಾಟಿಂಗ್ ಮಾಡಿತು. ಆದರೆ, ಭಾರತೀಯ ಬೌಲರ್ಗಳ ಮಾರಕ ದಾಳಿಗೆ ತತ್ತರಿಸಿದ ಐರ್ಲೆಂಡ್ ಕೇವಲ 96 ರನ್ಗಳಿಗೆ ಸರ್ವಪತನ ಕಂಡಿತು.ಐರ್ಲೆಂಡ್ ಪರ ಗರೆಥ್ ಡೆಲಾನಿ 14 ಎಸೆತಗಳಲ್ಲಿ 2 ಬೌಂಡರಿ ಮತ್ತು 2 ಸಿಕ್ಸರ್ಗಳ ಮೂಲಕ 26 ರನ್ ಗಳಿಸಿದ್ದು ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ.
ಬೌಲಿಂಗ್ನಲ್ಲಿ ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 4 ಓವರ್ಗಳಲ್ಲಿ 27 ರನ್ ನೀಡಿ 3 ವಿಕೆಟ್ ಪಡೆದರೆ, ಜಸ್ಪ್ರೀತ್ ಬುಮ್ರಾ ಮತ್ತು ಅರ್ಶ್ದೀಪ್ ಸಿಂಗ್ ತಲಾ 2 ವಿಕೆಟ್ ಪಡೆದರು. ಗೆಲುವಿನ ಖಾತೆ ತೆರೆಯಲು ಕೇವಲ 12.2 ಓವರ್ಗಳಲ್ಲಿ ಗುರಿ ಮುಟ್ಟಿದ ಭಾರತ ತಂಡ ಯಾವುದೇ ಆತಂಕವಿಲ್ಲದೆ ಯಶಸ್ವಿ ಚೇಸ್ ಮಾಡಿತು. ನಾಯಕ ರೋಹಿತ್ ಶರ್ಮಾ 37 ಎಸೆತಗಳಲ್ಲಿ 4 ಬೌಂಡರಿ ಮತ್ತು 3 ಸಿಕ್ಸರ್ ಸಮೇತ ಅಜೇಯ 52 ರನ್ ಬಾರಿಸಿದರು. ರಿಷಭ್ ಪಂತ್ 26 ಎಸೆತಗಳಲ್ಲಿ 3 ಬೌಂಡರಿ ಹಾಗೂ 2 ಸಿಕ್ಸರ್ಗಳ ಮೂಲಕ ಅಜೇಯ 36 ರನ್ ಗಳಿಸಿದರು. ರೋಹಿತ್ ಶರ್ಮಾ ಅವರು ಐರ್ಲೆಂಡ್ ವಿರುದ್ಧ ಅರ್ಧಶತಕ ಬಾರಿಸುವ ಜೊತೆಗೆ ವೇಳೆ ಟಿ20 ಕ್ರಿಕೆಟ್ನಲ್ಲಿ ಪ್ರಮುಖ ಮೂರು ದಾಖಲೆಗಳನ್ನು ನಿರ್ಮಿಸಿದರು.