ಟೀಮ್ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು ಸೆಮಿಫೈನಲ್ನಲ್ಲಿ ಭರ್ಜರಿಯಾಗಿ ಮಣಿಸಿ ಫೈನಲ್ಗೆ ಪ್ರವೇಶ ಪಡೆದುಕೊಂಡಿದೆ. ಈ ಮೂಲಕ ನಾಲ್ಕನೇ ಬಾರಿಗೆ ಏಕದಿನ ವಿಶ್ವಕಪ್ ಫೈನಲ್ಗೆ ಪ್ರವೇಶ ಪಡೆದುಕೊಂಡಿರುವ ಭಾರತ ಮೂರನೇ ಬಾರಿಗೆ ಚಾಂಪಿಯನ್ ಪಟ್ಟಕ್ಕೇರುವ ನಿರೀಕ್ಷೆಯಲ್ಲಿದೆ.
ಫೈನಲ್ ಪಂದ್ಯ ಮುಂದಿನ ಭಾನುವಾರ ಅಹ್ಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಆಯೋಜನೆಯಾಗಲಿದೆ.
ಇನ್ನು ಈ ಫೈನಲ್ ಪಂದ್ಯಕ್ಕಾಗಿ ಮೂರು ದಿನಗಳು ಬಾಕಿಯಿದ್ದು ಮುಂದಿನ ಭಾನುವಾರ ಆಯೋಜನೆಯಾಗಲಿದೆ. ಆದರೆ ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಇಂದೇ ಅಹ್ಮದಾಬಾದ್ಗೆ ಪ್ರಯಾಣ ಬೆಳೆಸಿದ್ದು ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕೆ ತನ್ನ ಅಂತಿಮ ಸಿದ್ಧತೆಯನ್ನು ಮಾಡಿಕೊಳ್ಳಲಿದೆ.
ಬುಧವಾರ ನಡೆದ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಭಾರತ 70 ರನ್ಗಳ ಅಂತರದಿಂದ ಮಣಿಸುವಲ್ಲಿ ಯಶಸ್ವಿಯಾಗಿತ್ತು. ವಿರಾಟ್ ಕೊಹ್ಲಿ, ಶ್ರೃಯಸ್ ಐಯ್ಯರ್ ಹಾಗೂ ಮೊಹಮ್ಮದ್ ಶಮಿ ಅವರ ಅಮೋಘ ಪ್ರದರ್ಶನ ಟೀಮ್ ಇಂಡಿಯಾದ ಈ ನಿರ್ಣಾಯಕ ಗೆಲುವಿಗೆ ಕಾರಣವಾಗಿತ್ತು. ಇದಾದ ಮರುದಿನವೇ ಭಾರತ ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯಕ್ಕಾಗಿ ಅಹ್ಮದಾಬಾದ್ಗೆ ಪ್ರಯಾಣ ನಡೆಸಿದೆ.