ಬೆಳಾಲು: ಆರ್ ಎಸ್ಎಸ್ ಪ್ರಚಾರಕ ಪ್ರಸಾದ್ ಬೆಳಾಲ (38) ನೇತ್ರಾವತಿ ನದಿಯಲ್ಲಿ ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳಾಲು ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
7 ವರ್ಷಕ್ಕೂ ಅಧಿಕ ಸಮಯದಿಂದ ಆರ್ ಎಸ್ಎಸ್ ನಲ್ಲಿದ್ದ ಪ್ರಸಾದ್ ಬೆಳಾಲ ಭಾನುವಾರದಂದು ಆಯತಪ್ಪಿ ನೇತ್ರಾವತಿ ನದಿಗೆ ಬಿದ್ದು ಈ ಅನಾಹುತ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅಗ್ನಿಶಾಮಕ ಸಿಬ್ಬಂದಿ ಹಾಗೂ ರಕ್ಷಣಾ ಕಾರ್ಯಾಚರಣೆ ಸಿಬ್ಬಂದಿಗಳು ಪ್ರಸಾದ್ ಬೆಳಾಲ ಅವರ ಮೃತದೇಹವನ್ನು ನದಿಯಿಂದ ಹೊರತೆಗೆದಿದ್ದಾರೆ. ಈಶ್ವರ ಮಲ್ಪೆ ನೇತೃತ್ವದ ಡೈವಿಂಗ್ ತಂಡದ ನೆರವಿನೊಂದಿಗೆ ಅಗ್ನಿಶಾಮಕ ಮತ್ತು ರಕ್ಷಣಾ ಸಿಬ್ಬಂದಿ ಅವರ ಮೃತದೇಹವನ್ನು ಹೊರತೆಗೆದಿದ್ದಾರೆ.
ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.